ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ ಟೆಸ್ಟ್‌ನಲ್ಲಿ ರಾಹುಲ್‌ ಶೂನ್ಯ; ಟ್ವಿಟರ್‌ನಲ್ಲಿ ಟ್ರೋಲ್‌ಗಳ ಮೊರೆತ

Last Updated 18 ಡಿಸೆಂಬರ್ 2018, 3:29 IST
ಅಕ್ಷರ ಗಾತ್ರ

ಆಸ್ಟ್ರೇಲಿಯಾ ಎದುರಿನ ಎರಡನೇ ಟೆಸ್ಟ್‌ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾದ ಕರ್ನಾಟಕದ ಕೆ.ಎಲ್‌.ರಾಹುಲ್‌ ಸೋಮವಾರ ಇಡೀ ದಿನ ಟ್ರೋಲ್‌ಗೆ ಒಳಗಾದರು. #KLRahul ಟ್ಯಾಗ್‌ ಮಂಗಳವಾರವೂ ಟ್ವಿಟರ್‌ ಟ್ರೆಂಡಿಂಗ್‌ನಲ್ಲಿ ಮುಂದುವರಿದಿದೆ.

’ರಾಹುಲ್‌ ಮೈದಾನದಲ್ಲಿ ಬ್ಯಾಟಿಂಗ್‌ ಮಾಡುವ ಅವಧಿಗಿಂತಲೂ ಹೆಚ್ಚು ಸಮಯನ ನಾನು ಉಸಿರನ್ನು ಬಿಡಿ ಹಿಡಿಯಬಲ್ಲೆ’, ’ಜೀರೋ ಸಿನಿಮಾದ ಪ್ರಚಾರ ಮಾಡುತ್ತಿರುವುದಕ್ಕೆ ಧನ್ಯವಾದಗಳು’,..ಹೀಗೆ ರಾಹುಲ್‌ ಅವರ ವೈಫಲ್ಯವನ್ನು ಟೀಕಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳ ಮಳೆಯೇ ಸುರಿಯುತ್ತಿವೆ.

ಎರಡನೇ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿಯೂ ರಾಹುಲ್‌ 2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದ್ದರು. 2018ರಲ್ಲಿ ದೇಶದ ಹೊರಗೆ ಒಂಬತ್ತು ಟೆಸ್ಟ್‌ ಪಂದ್ಯಗಳಲ್ಲಿ ಆಡಿರುವ ಅವರು 377 ರನ್‌ಗಳನ್ನಷ್ಟೇ ಗಳಿಸಿದ್ದಾರೆ. ಇಂಗ್ಲೆಂಡ್‌ ವಿರುದ್ಧ ಓವಲ್‌ನಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ಶತಕ ಸಾಧಿಸಿದ್ದನ್ನು ಹೊರತು ಪಡಿಸಿ ಉಳಿದ ಪಂದ್ಯಗಳಲ್ಲಿ ಸೂಕ್ತ ಪ್ರದರ್ಶನ ನೀಡಿಲ್ಲ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಒಟ್ಟು ಮೂರು ಇನಿಂಗ್ಸ್‌ನಲ್ಲಿ ಶೂನ್ಯಕ್ಕೆ ವಿಕೆಟ್‌ ಕಳೆದುಕೊಂಡಿದ್ದಾರೆ.

ತಂಡದ ನಾಯಕ ವಿರಾಟ್‌ ಕೊಹ್ಲಿ ಬೆಂಬಲ ಹೊಂದಿರುವ ರಾಹುಲ್‌, ನಿರಂತರವಾಗಿ ರನ್‌ ಗಳಿಕೆಯಲ್ಲಿ ವಿಫಲರಾಗಿರುವುದು ಕ್ರಿಕೆಟ್ ಪ್ರಿಯರಲ್ಲಿ ಬೇಸರ ಮೂಡಿಸಿದೆ. ಸೋಮವಾರ ರಾಹುಲ್‌ ಶೂನ್ಯ ಗಳಿಸಿ ವಾಪಾಸ್‌ ಆಗುತ್ತಿದ್ದಂತೆ ಟ್ವಿಟರ್‌ನಲ್ಲಿ ಟ್ರೋಲ್‌ಗಳು ಶುರುವಾದವು. ಬಹುಶಃ ರಾಹುಲ್‌ಗೆ ಇದೇ ಕೊನೆಯ ಟೆಸ್ಟ್ ಎಂದೂ ಕಾಲೆಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT