ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಪ್ರಕರಣ ಹೆಚ್ಚುತ್ತಿರುವ ಮಲೇಷ್ಯಾದಿಂದ ಬಂದ ವ್ಯಕ್ತಿ ಕೇರಳದಲ್ಲಿ ಸಾವು

Last Updated 1 ಮಾರ್ಚ್ 2020, 6:25 IST
ಅಕ್ಷರ ಗಾತ್ರ

ಕೊಚ್ಚಿ: ಕೊರೊನಾ ವೈರಸ್ ಸೋಂಕು (ಕೋವಿಡ್–19) ಪ್ರಕರಣ ಹೆಚ್ಚುತ್ತಿರುವ ಮಲೇಷ್ಯಾದಿಂದ ಬಂದ ವ್ಯಕ್ತಿಯೊಬ್ಬರು ಕೇರಳದ ಎರ್ನಾಕುಳಂನಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಆದರೆ, ಮಲೇಷ್ಯಾದಿಂದ ಬಂದ ವ್ಯಕ್ತಿಯಿಂದ ಪಡೆಯಲಾದ ಮಾದರಿಗಳಲ್ಲಿ ಕೊರೊನಾ ವೈರಸ್ ನೆಗೆಟಿವ್ ಕಂಡುಬಂದಿತ್ತು.

ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ನಿಗಾವಹಿಸಲಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಮೃತ ವ್ಯಕ್ತಿ ನ್ಯುಮೋನಿಯಾ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಇದೀಗ, ಅವರ ಸಾವಿಗೆ ಕೊರೊನಾ ವೈರಸ್‌ ಕೂಡಾ ಕಾರಣವಾಗಿತ್ತೇ ಎಂಬುದನ್ನು ತಿಳಿಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಹೆಚ್ಚಿನ ಮಾದರಿಗಳನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಿಕೊಟ್ಟಿದೆ.

ಮಲೇಷ್ಯಾದಲ್ಲಿ ಕೊರೊನಾಪೀಡಿತ ಸುಮಾರು 25 ಪ್ರಕರಣಗಳು ದಾಖಲಾಗಿವೆ. ಈ ಮಧ್ಯೆ, ಚೀನಾದಲ್ಲಿ ಸೋಂಕಿನಿಂದ 47 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 2,835 ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT