ಭಾನುವಾರ, ಮೇ 9, 2021
24 °C

ಒಂದು ಪಂದ್ಯದ ಸಂಭಾವನೆಯನ್ನು ಕೇರಳ ಸಂತ್ರಸ್ತರಿಗೆ ನೀಡಿದ ಟೀಂ ಇಂಡಿಯಾ ಆಟಗಾರರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಟಿಂಗಂ: ಪ್ರವಾಹಕ್ಕೆ ಸಿಲುಕಿದ್ದ ಕೇರಳದ ಸಂತ್ರಸ್ತರಿಗೆ ಸಹಾಯ ಮಾಡಲು ಭಾರತ ಕ್ರಿಕೆಟ್‌ ತಂಡದ ಆಟಗಾರರು ನಿರ್ಧರಿಸಿದ್ದಾರೆ. 

ಇಂಗ್ಲೆಂಡ್‌ನ ನಾಟಿಂಗಂನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಸಂಪೂರ್ಣ ಸಂಭಾವನೆಯನ್ನು ನೆರೆ ಸಂತ್ರಸ್ತರಿಗೆ ನೀಡಲಿದ್ದಾರೆ. 

ಪಂದ್ಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ, ‘ತಂಡದ ಗೆಲುವನ್ನು ಕೇರಳದ ಜನತೆಗೆ ಅರ್ಪಿಸುತ್ತೇವೆ’ ಎಂದು ಹೇಳಿದರು. 

11 ಮಂದಿ ಆಟಗಾರರ ತಂಡದಲ್ಲಿ ಸ್ಥಾನ ಪಡೆದವರಿಗೆ ಟೆಸ್ಟ್ ಪಂದ್ಯವೊಂದಕ್ಕೆ ₹ 15 ಲಕ್ಷ ಸಂಭಾವನೆ ನೀಡಲಾಗುತ್ತದೆ. ಹೀಗಾಗಿ ₹2 ಕೋಟಿ ಮೊತ್ತವನ್ನು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗುತ್ತದೆ. 

 ಇಂಗ್ಲೆಂಡ್‌ ವಿರುದ್ಧ ನಡೆದ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಭಾರತ 203 ರನ್‌ ಭರ್ಜರಿ ಜಯ ಸಾಧಿಸಿತ್ತು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು