ಶನಿವಾರ, ಫೆಬ್ರವರಿ 27, 2021
19 °C

Covid–19 India Update: ಹೊಸದಾಗಿ 2,958 ಪ್ರಕರಣ, ಸೋಂಕಿತರ ಸಂಖ್ಯೆ 49,391ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹರಡುತ್ತಲೇ ಇದ್ದು, ಹೊಸದಾಗಿ 2,958 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 126 ಜನರು ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 49,391ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ಬುಧವಾರ ಬೆಳಿಗ್ಗೆ ತಿಳಿಸಿವೆ.

ಬೆಳಿಗ್ಗೆ 8 ಗಂಟೆಗೆ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ದೇಶಾದ್ಯಂತ 33,514 ಸಕ್ರಿಯ ಕೋವಿಡ್ -19 ಪ್ರಕರಣಗಳು ಮತ್ತು ಇದುವರೆಗೂ ಒಟ್ಟಾರೆ 1,694 ಜನರು ಮೃತಪಟ್ಟಿದ್ದಾರೆ. ಕಳೆದ ದಿನಕ್ಕೆ ಹೋಲಿಸಿದರೆ ದೇಶದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಚೇತರಿಕೆ ಪ್ರಮಾಣವು ಶೇ 27.41 ರಿಂದ 28.71ಕ್ಕೆ ಏರಿಕೆಯಾಗಿದೆ. ಇದುವರೆಗೂ 14,182 ಜನರು ಗುಣಮುಖರಾಗಿದ್ದಾರೆ. 

ದೇಶದಲ್ಲಿಯೇ ಅತಿಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ವೈರಸ್‌ಗೆ ತುತ್ತಾಗಿರುವ ಮಹಾರಾಷ್ಟ್ರದಲ್ಲಿ ಒಟ್ಟು 15,525 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಇನ್ನೂ ಗುಜರಾತ್‌ನಲ್ಲಿ 6,245 ಪ್ರಕರಣಗಳು, ದೆಹಲಿಯಲ್ಲಿ ಒಟ್ಟು 5,104 ಪ್ರಕರಣಗಳು ಪತ್ತೆಯಾಗಿವೆ. 

ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಮಾರ್ಚ್ 25ರಿಂದ ಲಾಕ್‌ಡೌನ್ ಘೋಷಿಸಲಾಗಿದ್ದು, ಈಗಾಗಲೇ ಎರಡು ಬಾರಿ ಅದನ್ನು ವಿಸ್ತರಿಸಲಾಗಿದೆ. ದೇಶದಲ್ಲಿ ಮೂರನೇ ಹಂತದ ಲಾಕ್‌ಡೌನ್‌ ಜಾರಿಯಲ್ಲಿದ್ದು, ಮೇ 4ರಿಂದ ಕೆಲವು ಷರತ್ತುಗಳೊಂದಿಗೆ ಸಡಿಲಿಕೆ ಅವಕಾಶವನ್ನೂ ನೀಡಲಾಗಿದೆ. ಮೂರನೇ ಹಂತದ ಲಾಕ್‍ಡೌನ್ ಮೇ 17ಕ್ಕೆ ಕೊನೆಗೊಳ್ಳಲಿದೆ. 

ಕೋವಿಡ್-19 ಟ್ರ್ಯಾಕರ್ ಜಾನ್ಸ್ ಹಾಪ್ಕಿನ್ಸ್ ಪ್ರಕಾರ ಜಾಗತಿಕವಾಗಿ 3.6 ಶತಕೋಟಿ ಜನರು ಕೊರೊನಾ ವೈರಸ್ ಸೋಂಕಿತರಾಗಿದ್ದು, 257,207 ಮಂದಿ ಸಾವಿಗೀಡಾಗಿದ್ದಾರೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು