ನವದೆಹಲಿ: ದೇಶದಲ್ಲಿ ಕೋವಿಡ್–19 ಪ್ರಕರಣಗಳ ಸಂಖ್ಯೆ 3.20 ಲಕ್ಷದ ಗಡಿ ದಾಟಿದೆ. ಭಾನುವಾರ ಬೆಳಿಗ್ಗೆ ಅಂತ್ಯಗೊಂಡ ಲೆಕ್ಕಾಚಾರದ ಪ್ರಕಾರ ದೇಶದಲ್ಲಿ ಹಿಂದಿನ 24 ಗಂಟೆಗಳಲ್ಲಿ11,929 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.

ಶನಿವಾರ ಬೆಳಿಗ್ಗೆ 8ರಿಂದ ಭಾನುವಾರ ಬೆಳಿಗ್ಗೆ 8ರವರೆಗೆ8,049 ಕೋವಿಡ್ ರೋಗಿಗಳು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ಗುಣಮುಖರಾದ ಒಟ್ಟು ಕೋವಿಡ್ ರೋಗಿಗಳ ಸಂಖ್ಯೆ1,62,378 ಲಕ್ಷ ತಲುಪಿದೆ. ದೇಶದಲ್ಲಿ ಈವರೆಗೆ ಕೋವಿಡ್ ಬಾಧಿತರಾದವರಲ್ಲಿ ಅರ್ಧಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಿಗಿಂತ (1,49,348) ಗುಣಮುಖರಾದವರ ಸಂಖ್ಯೆ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಇದೇ ಅವಧಿಯಲ್ಲಿ 311 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 9,195ಕ್ಕೆ ತಲುಪಿದೆ. ಕೋವಿಡ್‌ನಿಂದ ಹೆಚ್ಚು ಮೃತಪಟ್ಟವರ ದೇಶಗಳ ಪಟ್ಟಿಯಲ್ಲಿ ಭಾರತವು ಜರ್ಮನಿ ಮತ್ತು ಇರಾನ್ ಅನ್ನು ಹಿಂದಿಕ್ಕಿ 9ನೇ ಸ್ಥಾನಕ್ಕೆ ಬಂದಿದೆ.

50.6 %: ಗುಣಮುಖರಾದವರ ಪ್ರಮಾಣ

2.98 %: ಕೋವಿಡ್‌ನಿಂದ ಮೃತಪಟ್ಟವರ ಪ್ರಮಾಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.