ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ದಿನ 11,000ಕ್ಕೂ ಹೆಚ್ಚು ಕೋವಿಡ್‌ ಪ್ರಕರಣ

Last Updated 14 ಜೂನ್ 2020, 19:31 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 3.20 ಲಕ್ಷದ ಗಡಿ ದಾಟಿದೆ. ಭಾನುವಾರ ಬೆಳಿಗ್ಗೆ ಅಂತ್ಯಗೊಂಡ ಲೆಕ್ಕಾಚಾರದ ಪ್ರಕಾರ ದೇಶದಲ್ಲಿ ಹಿಂದಿನ 24 ಗಂಟೆಗಳಲ್ಲಿ11,992 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚು ಪ್ರಕರಣಗಳು ಪತ್ತೆಯಾಗಿರುವ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.

ಶನಿವಾರ ಬೆಳಿಗ್ಗೆ 8ರಿಂದ ಭಾನುವಾರ ಬೆಳಿಗ್ಗೆ 8ರವರೆಗೆ8,049 ಕೋವಿಡ್ ರೋಗಿಗಳು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ಗುಣಮುಖರಾದ ಒಟ್ಟು ಕೋವಿಡ್ ರೋಗಿಗಳ ಸಂಖ್ಯೆ1,62,378 ಲಕ್ಷ ತಲುಪಿದೆ. ದೇಶದಲ್ಲಿ ಈವರೆಗೆ ಕೋವಿಡ್‌ ಬಾಧಿತರಾದವರಲ್ಲಿ ಅರ್ಧಕ್ಕೂ ಹೆಚ್ಚು ಜನರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳಿಗಿಂತ (1,49,348) ಗುಣಮುಖರಾದವರ ಸಂಖ್ಯೆ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಇದೇ ಅವಧಿಯಲ್ಲಿ 311 ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಮೃತಪಟ್ಟವರ ಒಟ್ಟು ಸಂಖ್ಯೆ 9,195ಕ್ಕೆ ತಲುಪಿದೆ. ಕೋವಿಡ್‌ನಿಂದ ಹೆಚ್ಚು ಮೃತಪಟ್ಟವರ ದೇಶಗಳ ಪಟ್ಟಿಯಲ್ಲಿ ಭಾರತವು ಜರ್ಮನಿ ಮತ್ತು ಇರಾನ್ ಅನ್ನು ಹಿಂದಿಕ್ಕಿ 9ನೇ ಸ್ಥಾನಕ್ಕೆ ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT