ಗುರುವಾರ , ಏಪ್ರಿಲ್ 15, 2021
24 °C

ದೇಶದ ಮೊದಲ ಲೋಕಪಾಲರಾಗಿ ಪಿ.ಸಿ. ಘೋಷ್‌ ಪ್ರಮಾಣ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಅವರು ದೇಶದ ಮೊದಲ ಲೋಕಪಾಲರಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಪ್ರಮಾಣ ಬೋಧಿಸಿದರು. ಈ ವೇಳೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಹಾಗೂ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಉಪಸ್ಥಿತರಿದ್ದರು.

ಜನವರಿ 01, 2014ರಲ್ಲಿ ಲೋಕಪಾಲ ಮಸೂದೆಯನ್ನು ರಾಷ್ಟ್ರಪತಿಗಳಿಂದ ಅಂಗೀಕಾರ ಪಡೆದುಕೊಂಡಿತ್ತು. ಅದಾದ ಐದು ವರ್ಷಗಳ ಬಳಿಕ ಘೋಷ್‌ ಅವರನ್ನು ನೇಮಿಸಲಾಗಿದೆ. ಕಲ್ಕತ್ತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಮತ್ತು ಆಂಧ್ರ ಪ್ರದೇಶ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದ ಘೋಷ್‌ ಅವರನ್ನು 2013ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಿಸಲಾಗಿತ್ತು. 2017ರಲ್ಲಿ ನಿವೃತ್ತಿ ಹೊಂದಿದ್ದರು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿಯೂ ಕಾರ್ಯನಿರ್ವಹಿಸಿದ್ದರು. 

ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಮತ್ತು ಮಾಜಿ ಸದ್ಯಸರುಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸುವ ಅಧಿಕಾರ ಹೊಂದಿದ್ದಾರೆ.

ನ್ಯಾಯಮೂರ್ತಿಗಳಾದ ದಿಲೀಪ್ ಬಿ ಬೋಸ್ಲೆ, ಪ್ರದೀಪ್ ಕುಮಾರ್ ಮೊಹಾಂತಿ, ಅಭಿಲಾಷ ಕುಮಾರಿ, ಅಜಯ್ ಕುಮಾರ್ ತ್ರಿಪಾಠಿ ಅವರೂ ಲೋಕಪಾಲ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಈ ಎಲ್ಲರೂ ಐದು ವರ್ಷಗಳ ಅಥವಾ ತಮ್ಮ 70ನೇ ವಯಸ್ಸಿನ ವರೆಗೆ ಅಧಿಕಾರದಲ್ಲಿರಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು