ಭಾನುವಾರ, ಜುಲೈ 25, 2021
24 °C

ಐಎಫ್‌ಎಸ್ ಅಧಿಕಾರಿ ಇಂದ್ರಮಣಿ ಪಾಂಡೆ ವಿಶ್ವಸಂಸ್ಥೆ ಖಾಯಂ ಪ್ರತಿನಿಧಿ

ಎಎನ್ಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹಿರಿಯ ಐಎಫ್ಎಸ್ ಅಧಿಕಾರಿ ಇಂದ್ರಮಣಿ ಪಾಂಡೆ ಅವರನ್ನು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆದೇಶ ಹೊರಡಿಸಿದೆ. 1990ರ ಸಾಲಿನ ಐಎಫ್ಎಸ್ ಅಧಿಕಾರಿಯಾಗಿರುವ ಇಂದ್ರಮಣಿ ಪಾಂಡೆ 2015ರಲ್ಲಿ ಓಮನ್‌‌ನಲ್ಲಿ  ಭಾರತೀಯ ರಾಯಭಾರಿಯಾಗಿದ್ದರು. ಅಲ್ಲದೆ, ಪ್ಯಾರಿಸ್‌ನಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಅಧಿಕಾರಿಯಾಗಿಯೂ ಸೇವೆಸಲ್ಲಿಸಿದ್ದಾರೆ.

ಜಿನೇವಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಸಂಸ್ಥೆಯಲ್ಲಿ ಭಾರತೀಯ ಪ್ರತಿನಿಧಿಯಾಗಿ ಇವರು ಸೇವೆಸಲ್ಲಿಸಲಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು