ವಿಚಾರಣೆ: ಹಿಂದೆ ಸರಿದ ಇಂದೂ ಮಲ್ಹೋತ್ರಾ

ನವದೆಹಲಿ: ಗೋಮಾಂಸವನ್ನು ಹೊಂದಿರುವ ಮಾತ್ರಕ್ಕೆ ಆ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸುವಂತಿಲ್ಲ ಎಂಬ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ ಸರಣಿ ಅರ್ಜಿಗಳ ವಿಚಾರಣೆಯಿಂದ ತಾವು ಹಿಂದೆ ಸರಿಯುವುದಾಗಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ಹೇಳಿದ್ದಾರೆ.
‘ಇದೇ ಪ್ರಕರಣದಲ್ಲಿ ಈ ಹಿಂದೆ ವಕಾಲತ್ತು ಮಾಡಿರುವುದರಿಂದ ಇಂದೂ ಮಲ್ಹೋತ್ರಾ ಅವರು ಈ ಪ್ರಕರಣದ ವಿಚಾರಣೆಯಿಂದ ದೂರ ಇರಲು ನಿರ್ಧರಿಸಿದ್ದಾರೆ’ ಎಂದು ನ್ಯಾಯಪೀಠದ ನೇತೃತ್ವ ವಹಿಸಿರುವ ನ್ಯಾಯಮೂರ್ತಿ ಎ.ಎಂ. ಸಪ್ರೆ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.