ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಂತರ ಬಜೆಟ್‌: ಸ್ಪಷ್ಟನೆ

ಗೊಂದಲ ದೂರ ಮಾಡಿದ ಹಣಕಾಸು ಸಚಿವಾಲಯ
Last Updated 30 ಜನವರಿ 2019, 20:19 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರವು 2019–20ನೆ ಹಣಕಾಸು ವರ್ಷದ ಮಧ್ಯಂತರ ಬಜೆಟ್‌ ಮಂಡಿಸಲಿದೆ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿ ಗೊಂದಲಕ್ಕೆ ತೆರೆ ಎಳೆದಿದೆ.

ಶುಕ್ರವಾರ (ಫೆ.1) ಮಂಡನೆಯಾಗಲಿರುವ ಮಧ್ಯಂತರ ಬಜೆಟ್‌ನಲ್ಲಿ ಮಧ್ಯಮವರ್ಗ, ರೈತರಿಗೆ ಹಲವಾರು ಕೊಡುಗೆ
ಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿನ ಎನ್‌ಡಿಎ ಸರ್ಕಾರದ ಅಧಿಕಾರಾವಧಿಯ ಕೊನೆಯ ಬಜೆಟ್‌ ಇದಾಗಿರಲಿದೆ. ಅರುಣ್‌ ಜೇಟ್ಲಿ ಅವರ ಅನಾರೋಗ್ಯದ ಕಾರಣಕ್ಕೆ ಹಣಕಾಸು ಖಾತೆ ನಿರ್ವಹಿಸುತ್ತಿರುವ ಪೀಯೂಷ್‌ ಗೋಯಲ್‌ ಅವರು ಲೋಕಸಭೆಯಲ್ಲಿ ಮಧ್ಯಂತರ ಬಜೆಟ್‌ ಮಂಡಿಸಲಿದ್ದಾರೆ.

2019–20ನೆ ಹಣಕಾಸು ವರ್ಷದ ಬಜೆಟ್‌ ಅನ್ನು ಮಧ್ಯಂತರ ಬಜೆಟ್‌ ಬದಲಿಗೆ ಸಾಮಾನ್ಯ ಬಜೆಟ್‌ ಎಂದೇ ಅಧಿಕೃತವಾಗಿ ಪರಿಗಣಿಸ
ಬೇಕು ಎಂದು ವಾಣಿಜ್ಯ ಸಚಿವಾಲಯವು ಬುಧವಾರ ಬೆಳಿಗ್ಗೆ ವಾಟ್ಸ್‌ಆ್ಯಪ್‌ ಸಂದೇಶದಲ್ಲಿ ತಿಳಿಸಿತ್ತು. ಆನಂತರ ಈ ಬಗ್ಗೆ ಸ್ಪಷ್ಟನೆ ನೀಡಿದ ಹಣಕಾಸು ಸಚಿವಾಲಯವು ಮಧ್ಯಂತರ ಬಜೆಟ್‌ ಎಂದೇ ಪರಿಗಣಿಸಬೇಕು ಎಂದು ತಿಳಿಸಿದೆ.

ಸಂಪ್ರದಾಯದ ಪ್ರಕಾರ, ಕೇಂದ್ರ ಸರ್ಕಾರವು ಮಧ್ಯಂತರ ಬಜೆಟ್‌ ಮಂಡಿಸದೆ, ಪೂರ್ಣ ಪ್ರಮಾಣದ ಬಜೆಟ್‌ ಮಂಡಿ
ಸಲಿದೆ ಎನ್ನುವ ನಿರೀಕ್ಷೆಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸುವುದು ಸಂಸತ್ತಿನಲ್ಲಿ ಪಾಲಿಸಿಕೊಂಡು ಬಂದಿರುವ ಸಂಪ್ರದಾಯದ ಸ್ಪಷ್ಟ ಉಲ್ಲಂಘನೆಯಾಗಲಿದೆ ಎಂದು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT