ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಸಿಎಂ ಆಯ್ಕೆಗೆ ತಕರಾರಿಲ್ಲ: ಸಿದ್ದರಾಮಯ್ಯ

Last Updated 13 ಮೇ 2018, 10:15 IST
ಅಕ್ಷರ ಗಾತ್ರ

ಮೈಸೂರು: ‘ದಲಿತ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡರೆ ನನ್ನ ತಕರಾರಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಸ್ಪಷ್ಟಪಡಿಸಿದರು.

ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ‘ದಲಿತ ಮುಖ್ಯಮಂತ್ರಿ ಒಮ್ಮೆಲೇ ಮಾಡಲು ಸಾಧ್ಯವಿಲ್ಲ. ಶಾಸಕರ ಸಮ್ಮತಿ ಬೇಕು. ಈ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ’ ಎಂದು ಹೇಳಿದರು.

‘ಎರಡೂ ಕಡೆ ಗೆಲುವು ಪಡೆಯುತ್ತೇನೆ. ಬಾದಾಮಿಯಲ್ಲಿ ನನಗೆ ಭಾರಿ ಅಂತರದ ಮುನ್ನಡೆ ದೊರೆಯಲಿದೆ. ಚಾಮುಂಡೇಶ್ವರಿಯಲ್ಲಿ ನಿರೀಕ್ಷಿಸಿದಷ್ಟು ಮುನ್ನಡೆ ದೊರೆಯದಿದ್ದರೂ, ಗೆಲುವು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

[related]

‘ಚುನಾವಣಾ ರಾಜಕೀಯದಿಂದ ದೂರ ಸರಿದಿದ್ದೇನೆ. ಆ ಬ್ರಹ್ಮ ಬಂದು ಹೇಳಿದರೂ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ನಾನು ಈ ಬಾರಿಯೇ ಚುನಾವಣೆಗೆ ನಿಲ್ಲಬಾರದೆಂದು ತೀರ್ಮಾನಿಸಿದ್ದೆ.  ಆದರೆ ಮುಖ್ಯಮಂತ್ರಿಯಾಗಿದ್ದುಕೊಂಡು ಪಲಾಯನ ಮಾಡಿದ ಎಂದು ಜನರು ಭಾವಿಸುವುದು ಬೇಡ ಎಂಬ ಕಾರಣದಿಂದ ಸ್ಪರ್ಧಿಸಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT