ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ: ಚಿದಂಬರಂ ನ್ಯಾಯಾಂಗ ಬಂಧನ ಡಿ.11ರವರೆಗೆ ವಿಸ್ತರಣೆ

Last Updated 27 ನವೆಂಬರ್ 2019, 13:03 IST
ಅಕ್ಷರ ಗಾತ್ರ

ನವದೆಹಲಿ:ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಬುಧವಾರ ಡಿಸೆಂಬರ್ 11ರವರೆಗೆ ವಿಸ್ತರಿಸಿದೆ.

ಪ್ರಕರಣದ ತನಿಖೆ ಪ್ರಗತಿಯಲ್ಲಿರುವುದರಿಂದ ಆರೋಪಿಯ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸಬೇಕು ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಮನವಿ ಮಾಡಿತ್ತು. ಇದನ್ನು ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್‌ಪುರಸ್ಕರಿಸಿದ್ದಾರೆ. ಜಾರಿ ನಿರ್ದೇಶನಾಲಯದ ಮನವಿಗೆ ಚಿದಂಬರಂ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಲಿಲ್ಲ.

ಜಾರಿ ನಿರ್ದೇಶನಾಲಯ ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಐಎನ್‌ಎಕ್ಸ್‌ ಮೀಡಿಯಾ ಪ್ರರಣಕ್ಕೆ ಸಂಬಂಧಿಸಿ 2017ರ ಮೇನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಅವರನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ಜಾಮೀನು ನೀಡಿದೆ. ಆದರೆ, ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ‍್ರಕರಣದಲ್ಲಿ ಜಾಮೀನು ದೊರೆಯದೇ ಇರುವುದರಿಂದ ಅವರು ಜೈಲಿನಲ್ಲೇ ಇರಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT