ಬುಧವಾರ, ನವೆಂಬರ್ 13, 2019
23 °C
ಐಎನ್‌ಎಕ್ಸ್‌ ಮೀಡಿಯಾ ಹಗರಣ: ಚಿದಂಬರಂ ಜಾಮೀನು ಅರ್ಜಿ

ಸಿಬಿಐಗೆ ದೆಹಲಿ ಹೈಕೋರ್ಟ್‌ ನೋಟಿಸ್‌

Published:
Updated:
Prajavani

ನವದೆಹಲಿ : ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ಗುರುವಾರ ನೋಟಿಸ್‌ ಜಾರಿ ಮಾಡಿದೆ. 

ಇದೊಂದು ರಾಜಕೀಯ ದ್ವೇಷದಿಂದ ಕೂಡಿರುವ ಪ್ರಕರಣವಾಗಿದ್ದು, ಜಾಮೀನು ನೀಡಬೇಕು ಎಂದು ಚಿದಂಬರಂ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್‌ ಕೈತ್‌ ಅವರು, 7 ದಿನಗಳೊಳಗೆ ಪ್ರಕರಣದ ಸ್ಥಿತಿಗತಿಯ ವರದಿಯನ್ನು ಸಲ್ಲಿಸಬೇಕು ಎಂದು ಸಿಬಿಐಗೆ ಸೂಚಿಸಿದರು.

ಪ್ರತಿಕ್ರಿಯಿಸಿ (+)