ಶುಕ್ರವಾರ, ಫೆಬ್ರವರಿ 26, 2021
18 °C

ಅಕ್ಟೋಬರ್ 17ರ ವರೆಗೆ ಚಿದಂಬರಂ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 17ರವರೆಗೆ ವಿಸ್ತರಿಸಲಾಗಿದೆ.

ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿ ಗುರುವಾರ ಮುಗಿದಿದ್ದು, ಅವರನ್ನು ವಿಶೇಷ ನ್ಯಾಯಮೂರ್ತಿ ಅಜಯ್ ಕುಮಾರ್ ಕುಹಾರ್ ಮುಂದೆ ಹಾಜರುಪಡಿಸಲಾಗಿತ್ತು. ಬಂಧನ ಅವಧಿ ವಿಸ್ತರಣೆ ಮಾಡುವಂತೆ ಸಿಬಿಐ ಒತ್ತಾಯಿಸಿತ್ತು. 

ಇದನ್ನೂ ಓದಿ: ಚಿದಂಬರಂಗೆ ಜಾಮೀನು ನಿರಾಕರಣೆ

ವಿಚಾರಣೆ ವೇಳೆ ತಮಗೆ ಕಾಯಿಲೆ ಇರುವ ಕಾರಣ ತಿಹಾರ್ ಜೈಲಿನಲ್ಲಿ ಮನೆಯೂಟ ಪೂರೈಸಲು ಅನುಮತಿ ನೀಡಬೇಕೆಂದು ಚಿದಂಬರಂ  ಮನವಿ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಜಾಮೀನು ಕೋರಿ ಚಿದಂಬರಂ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದರು. ಆದರೆ ಸೆಪ್ಟೆಂಬರ್ 30ರಂದು  ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್‌  ಜಾಮೀನು ನಿರಾಕರಿಸಿತ್ತು.

ಚಿದಂಬರಂ ಅವರಿಗೆ ಜಾಮೀನು ನೀಡಿದಲ್ಲಿ ಅವರು, ಪ್ರಕರಣದ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದನ್ನು ಅಲ್ಲಗಳೆಯಲಾಗದು. ಕಾಂಗ್ರೆಸ್‌ನಲ್ಲಿ ಪ್ರಭಾವಿ ರಾಜಕಾರಣಿಯಾಗಿರುವ ಚಿದಂಬರಂ ಗೃಹ ಮತ್ತು ಹಣಕಾಸು ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಅವರೀಗ ಹಾಲಿ ಸಂಸತ್ ಸದಸ್ಯರೂ ಮತ್ತು ದೀರ್ಘಕಾಲದಿಂದ ವಕೀಲರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ನ್ಯಾಯಮೂರ್ತಿ ಸುರೇಶ್ ಕೈತ್ ಅಭಿಪ್ರಾಯಪಟ್ಟಿದ್ದರು.

ಇದನ್ನೂ ಓದಿ: ತಿಹಾರ್‌ ಜೈಲಿಗೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ

ಜಾಮೀನು ನಿರಾಕರಣೆಯ ಬಗ್ಗೆ ಉಲ್ಲೇಖಿಸಿದ ಕೋರ್ಟ್, ಸಿಬಿಐನ ತನಿಖೆ ಪ್ರಗತಿಯಲ್ಲಿದ್ದು, ಈ ಹಂತದಲ್ಲಿ ಚಿದಂಬರಂ ಅವರನ್ನು ಬಿಡುಗಡೆ ಮಾಡುವುದರಿಂದ ಸಾಕ್ಷ್ಯಾಧಾರಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: ಚಿದಂಬರಂ, ಕಾರ್ತಿ ಹಾಗೂ ಐಎನ್‌ಎಕ್ಸ್: ಏನಿದು ಹಗರಣ?

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು