ಶುಕ್ರವಾರ, ಡಿಸೆಂಬರ್ 13, 2019
24 °C

ಐಎನ್‌ಎಕ್ಸ್‌ ಪ್ರಕರಣ: ಪಿ.ಚಿದಂಬರಂ ನ್ಯಾಯಾಂಗ ಬಂಧನ ನ.27ಕ್ಕೆ ವಿಸ್ತರಣೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಪಿ.ಚಿದಂಬರಂ

ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿಯ ನ್ಯಾಯಾಲಯ ನವೆಂಬರ್ 27ರವರೆಗೆ ವಿಸ್ತರಿಸಿದೆ.

ಐಎನ್‌ಎಕ್ಸ್‌ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಅಕ್ಟೋಬರ್ 22ರಂದು ಚಿದಂಬರಂ ಅವರಿಗೆ ಜಾಮೀನು ದೊರೆತಿದೆ. ಆದರೂ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಪ್ರಕರಣದಲ್ಲಿ ಅವರನ್ನು ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

ಇದನ್ನೂ ಓದಿ: ಚಿದಂಬರಂಗೆ ಆಸ್ಪತ್ರೆ ವಾಸ ಬೇಡ: ಸೊಳ್ಳೆ ಪರದೆ, ಮನೆ ಆಹಾರ ನೀಡಿ ಎಂದ ಹೈಕೋರ್ಟ್‌

ಚಿದಂಬರಂ ಅವರನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯವಿಲ್ಲ. ಅವರಿರುವ ಸೆಲ್‌ನ ಸುತ್ತ ಸ್ವಚ್ಛ ಮತ್ತು ನಿರ್ಮಲ ಪರಿಸರ ಇರುವಂತೆ ನೋಡಿಕೊಳ್ಳಬೇಕು. ಜತೆಗೆ ಮನೆಯಲ್ಲಿ ತಯಾರಿಸಿದ ಆಹಾರ, ಮಿನರಲ್ ವಾಟರ್, ಸೊಳ್ಳೆ ಪರದೆ ನೀಡಬೇಕು ಎಂದು ದೆಹಲಿ ಹೈಕೋರ್ಟ್ ನವೆಂಬರ್ 1ರಂದು ಜೈಲು ಅಧಿಕಾರಿಗಳಿಗೆ ಸೂಚಿಸಿತ್ತು.

ಇದಕ್ಕೂ ಮುನ್ನ, ಇ.ಡಿ ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು ನೀಡುವಂತೆ ದೆಹಲಿ ಹೈಕೋರ್ಟ್‌ಗೆ ಚಿದಂಬರಂ ಮನವಿ ಮಾಡಿದ್ದರು. ಆದರೆ ಅದು ತಿರಸ್ಕೃತಗೊಂಡಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು