ಕಾರ್ತಿ ಚಿದಂಬರಂಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದ ಸುಪ್ರೀಂ

ಬುಧವಾರ, ಮೇ 22, 2019
24 °C
₹10 ಕೋಟಿ ಠೇವಣಿ ಇರಿಸುವಂತೆ ಸೂಚನೆ

ಕಾರ್ತಿ ಚಿದಂಬರಂಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದ ಸುಪ್ರೀಂ

Published:
Updated:

ನವದೆಹಲಿ: ಏರ್‌ಸೆಲ್–ಮ್ಯಾಕ್ಸಿಸ್ ಹಗರಣ ಸಂಬಂಧ ತನಿಖೆ ಎದುರಿಸುತ್ತಿರುವ ಕಾರ್ತಿ ಚಿದಂಬರಂಗೆ ಮೇ ಮತ್ತು ಜೂನ್ ತಿಂಗಳಲ್ಲಿ ವಿದೇಶ ಪ್ರವಾಸ ಕೈಗೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಅಮೆರಿಕ, ಜರ್ಮನಿ, ಸ್ಪೈನ್‌ ದೇಶಗಳಿಗೆ ತೆರಳಲು ಅನುವು ಮಾಡಿಕೊಟ್ಟ ಸುಪ್ರೀಂ, ₹10 ಕೋಟಿ ಠೇವಣಿ ಇರಿಸುವಂತೆ ಹೇಳಿದೆ.

ಮುಖ್ಯ ನ್ಯಾಯಾಮೂರ್ತಿಗಳಾದ ರಂಜನ್ ಗೊಗೊಯಿ ಹಾಗೂ ದೀಪಕ್ ಮಿಶ್ರಾ ನೇತೃತ್ವದ ಪೀಠ ಈ ಆದೇಶ ಹೊರಡಿಸಿದ್ದು, ಈ ಹಿಂದೆ ವಿಧಿಸಿದ್ದ ನಿಯಮಗಳು ಈಗಲೂ ಅನ್ವಯವಾಗಲಿದೆ ಎಂದು ಹೇಳಿದೆ. 

ಜೊತೆಗೆ ಕೇಂದ್ರ ಹಣಕಾಸು ಮಾಜಿ ಸಚಿವ ಚಿದಂಬರಂ ಹಾಗೂ ಪುತ್ರ ಕಾರ್ತಿ ಅವರನ್ನು ಬಂಧಿಸದಂತೆ ನೀಡಿರುವ ಮಧ್ಯಂತರ ರಕ್ಷಣೆಯನ್ನು ವಿಶೇಷ ನ್ಯಾಯಾಲಯ ಮೇ 30ರವರೆಗೆ ಮುಂದುವರಿಸಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಬಂಧನದ ಭೀತಿಯಿಂದ ಕಾರ್ತಿ, ಚಿದಂಬರಂ ನಿರಾಳ

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !