ಸಿಬಿಐ ಮುಖ್ಯಸ್ಥರಾಗಿ ಐಪಿಎಸ್‌ ಅಧಿಕಾರಿ ರಿಷಿ ಕುಮಾರ್‌ ಶುಕ್ಲಾ ನೇಮಕ

7

ಸಿಬಿಐ ಮುಖ್ಯಸ್ಥರಾಗಿ ಐಪಿಎಸ್‌ ಅಧಿಕಾರಿ ರಿಷಿ ಕುಮಾರ್‌ ಶುಕ್ಲಾ ನೇಮಕ

Published:
Updated:

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಹೊಸ ಸಿಬಿಐ ಮುಖ್ಯಸ್ಥರನ್ನಾಗಿ ಹಿರಿಯ ಐಪಿಎಸ್‌ ಅಧಿಕಾರಿ ರಿಷಿ ಕುಮಾರ್‌ ಶುಕ್ಲಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 

ಸಿಬಿಐಗೆ ನೂತನ ಮುಖ್ಯಸ್ಥರ ನೇಮಕ ಮಾಡುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ಸಭೆ ನಡೆದಿತ್ತು. ಸಮಿತಿಯ ಸದಸ್ಯರಾದ ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರು ಪ್ರಧಾನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. 

ಇದನ್ನೂ ಓದಿ: ಕಾಂಗ್ರೆಸ್‌ ಆಕ್ಷೇಪದ ನಡುವೆಯೂ ಸಿಬಿಐ ಮುಖ್ಯಸ್ಥರ ಹೆಸರು ಪ್ರಕಟಿಸುವ ಸಾಧ್ಯತೆ

ನಿನ್ನೆ ನಡೆದ ಸಭೆಯಲ್ಲಿ ಸಿಬಿಐ ಮುಖ್ಯಸ್ಥರ ಆಯ್ಕೆ ಬಗ್ಗೆ ಒಮ್ಮತದ ತೀರ್ಮಾನಕ್ಕೆ ಬರಲಾಗಿರಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿದ್ದವು. 

ರಿಷಿ ಕುಮಾರ್ ಶುಕ್ಲಾ ಅವರ ಅಧಿಕಾರಾವಧಿ ಎರಡು ವರ್ಷ ಇರಲಿದೆ. ಇವರು1983ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದಾರೆ. ಇವರು ಮಧ್ಯಪ್ರದೇಶದ ಪೊಲೀಸ್‌ ಮಹಾ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. 

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !