ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಟುಂಬದವರಿಗೆ ಕೊರೊನಾ ಹರಡುವ ಭಯ, ದೆಹಲಿಯಲ್ಲಿ ಐಆರ್‌ಎಸ್ ಅಧಿಕಾರಿ ಆತ್ಮಹತ್ಯೆ

Last Updated 15 ಜೂನ್ 2020, 1:48 IST
ಅಕ್ಷರ ಗಾತ್ರ

ದೆಹಲಿ: ದೆಹಲಿಯ ದ್ವಾರಕಾ ಪ್ರದೇಶದಲ್ಲಿ 56ರ ಹರೆಯದ ಐಆರ್‌ಎಸ್ ಅಧಿಕಾರಿಯೊಬ್ಬರು'ಆ್ಯಸಿಡ್‌ನಂತಿರುವ ದ್ರಾವಣ'ವೊಂದನ್ನು ಸೇವಿಸಿ ತಮ್ಮ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

'ಕುಟುಂಬದವರಿಗೆ ಕೋವಿಡ್-19 ಹರಡಲು ನಾನು ಕಾರಣ ಆಗಬಾರದು. ಅವರು ಸಂಕಷ್ಟ ಅನುಭವಿಸುವುದು ಇಷ್ಟವಿಲ್ಲ' ಎಂದು ಬರೆದಿರುವ ಟಿಪ್ಪಣಿಯೊಂದು ಕಾರಿನೊಳಗೆ ಪತ್ತೆಯಾಗಿದೆ.

ವಾರಗಳ ಹಿಂದೆ ಈ ವ್ಯಕ್ತಿ ಕೋವಿಡ್-19 ಪರೀಕ್ಷೆ ಮಾಡಿಸಿದ್ದು, ಸೋಂಕು ಇಲ್ಲ ಎಂದು ದೃಢಪಟ್ಟಿತ್ತು.ಆದರೆ ತನ್ನಿಂದ ಕುಟುಂಬದವರಿಗೆ ಸೋಂಕು ಹರಡಬಹುದು ಎಂಬ ಭಯ ಅವರಿಗೆ ಇತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದ್ವಾರಕಾ ದಕ್ಷಿಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಭಾನುವಾರಈ ಘಟನೆ ನಡೆದಿದೆ. ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸುವ ಹೊತ್ತಿಗೆ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬದವರಿಗೆ ಬಿಟ್ಟು ಕೊಡಲಾಗುವುದು. ಆತ್ಮಹತ್ಯೆ ಪ್ರಕರಣ ಬಗ್ಗೆ ತನಿಖೆ ಮುಂದುವರಿದಿದೆ ಎಂದಿದ್ದಾರೆ ಪೊಲೀಸರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT