ಆದಾಯ ತೆರಿಗೆ ಇಲಾಖೆ ಅಧಿಕಾರಿ ಬಂಧನ

7
ಮನೆ ಕೆಲಸದ ಬಾಲಕಿ ಮೇಲೆ ಅತ್ಯಾಚಾರ

ಆದಾಯ ತೆರಿಗೆ ಇಲಾಖೆ ಅಧಿಕಾರಿ ಬಂಧನ

Published:
Updated:

ಮುಂಬೈ: ಮನೆಗೆಲಸದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ, ಆದಾಯ ತೆರಿಗೆ ಇಲಾಖೆ ಉಪ ಆಯುಕ್ತರನ್ನು ಬಂಧಿಸಲಾಗಿದೆ.

ಭಾರತೀಯ ಕಂದಾಯ ಸೇವೆ (ಐಆರ್‌ಎಸ್‌) ಅಧಿಕಾರಿಯಾದ ವೀರಭದ್ರ ವಿಸಾಲ್‌ವತ್‌ (42) ತಮ್ಮ ಮನೆಯಲ್ಲಿ ಕಳೆದ ವರ್ಷದ ಫೆಬ್ರುವರಿಯಲ್ಲಿ ಈ ಕೃತ್ಯ ಎಸಗಿದ ಆರೋಪ ಎದುರಿಸುತ್ತಿದ್ದಾರೆ.

‘17 ವರ್ಷದ ಸಂತ್ರಸ್ತೆ ಕಳೆದ ತಿಂಗಳು ದೂರು ನೀಡಿದ್ದಳು. ವೀರಭದ್ರ ಅವರನ್ನು ಗುರುವಾರ ಬಂಧಿಸಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್‌ನವರಾದ ವೀರಭದ್ರ, ಸರ್ಕಾರಿ ವಸತಿಗೃಹದಲ್ಲಿ ವಾಸವಿದ್ದರು. ಅವರನ್ನು ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು, ಇದೇ 10ರವರೆಗೆ ಪೊಲೀಸ್‌ ವಶಕ್ಕೆ ನೀಡಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !