ಭಾನುವಾರ, ಸೆಪ್ಟೆಂಬರ್ 26, 2021
25 °C
ಇಶ್ರತ್‌ ಜಹಾಂ ನಕಲಿ ಎನ್‌ಕೌಂಟರ್‌ ಪ್ರಕರಣ

ವಂಜಾರ, ಅಮಿನ್‌ ನಿರಾಳ

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಇಷ್ರತ್‌ ಜಹಾಂ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಮಾಜಿ ಪೊಲೀಸ್‌ ಅಧಿಕಾರಿಗಳಾದ ಡಿ.ಜಿ. ವಂಜಾರ ಮತ್ತು ಎನ್.ಕೆ. ಅಮಿನ್‌ ಅವರ ವಿರುದ್ಧದ ಮೊಕದ್ದಮೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಕೈಬಿಟ್ಟಿದೆ.

ಪ್ರಕರಣದಿಂದ ಬಿಡುಗಡೆ ಕೋರಿ ಈ ಇಬ್ಬರು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತು. ಈ ಪ್ರಕರಣಕ್ಕೆ ಬಂಧಿಸಿದಂತೆ ಇಬ್ಬರ ವಿರುದ್ಧ ಮೊಕದ್ದಮೆ ದಾಖಲಿಸಲು ಗುಜರಾತ್‌ ಸರ್ಕಾರ ಅನುಮತಿ ನಿರಾಕರಿಸಿದ್ದರಿಂದ ನ್ಯಾಯಾಲಯ ಈ ಕ್ರಮಕೈಗೊಂಡಿದೆ.

‘ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲು ಈ ಅಧಿಕಾರಿಗಳ ಹೆಸರನ್ನು ಕೈಬಿಡಲಾಗಿದೆ. ಹೀಗಾಗಿ, ಅವರ ವಿರುದ್ಧ ವಿಚಾರಣೆ ನಡೆಸುವುದನ್ನೂ ಕೈಬಿಡಲಾಗಿದೆ’ ಎಂದು ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಮೂರ್ತಿ ಜೆ.ಕೆ. ಪಾಂಡ್ಯ ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು