ಶನಿವಾರ, ನವೆಂಬರ್ 23, 2019
17 °C

ಜಾಲತಾಣಕ್ಕೆ ಆಧಾರ್‌: ಶೀಘ್ರ ನಿರ್ಧಾರ ಅಗತ್ಯ– ಸುಪ್ರೀಂ

Published:
Updated:

ನವದೆಹಲಿ: ‘ಸಾಮಾಜಿಕ ಜಾಲತಾಣ ಖಾತೆಗೆ ಆಧಾರ್‌ ಸಂಖ್ಯೆಯನ್ನು ಜೋಡಿಸುವ ಅಗತ್ಯದ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಬೇಕು’ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ.

‘ಈ ವಿಚಾರವನ್ನು ನಾವು ನಿರ್ಧರಿಸಬೇಕೇ ಅಥವಾ ಹೈಕೋರ್ಟ್‌ಗಳು ತೀರ್ಮಾನಿಸುವವೇ ಎಂಬ ಬಗ್ಗೆ ಈಗಲೇ ಏನನ್ನೂ ಹೇಳಲಾಗದು. ನಾವೀಗ ದೂರಿನ ವಿವರಗಳ ಕುರಿತು ಮಾತನಾಡುವುದಿಲ್ಲ. ‘ಮದ್ರಾಸ್‌, ಬಾಂಬೆ ಹಾಗೂ ಮಧ್ಯಪ್ರದೇಶ ಹೈಕೋರ್ಟ್‌ಗಳಲ್ಲಿರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾವಣೆ ಮಾಡಬೇಕು’ ಎಂಬ ಫೇಸ್‌ಬುಕ್‌ ಸಂಸ್ಥೆಯ ಮನವಿಯ ಬಗ್ಗೆ ಮಾತ್ರ ವಿಚಾರಣೆ ನಡೆಸುತ್ತಿದ್ದೇವೆ’ ಎಂದು ನ್ಯಾಯಮೂರ್ತಿಗಳಾದ ದೀಪಕ್‌ ಗುಪ್ತಾ ಹಾಗೂ ಅನಿರುದ್ಧ ಬೋಸ್‌ ಅವರ ಪೀಠ ಹೇಳಿದೆ.

‘ಹೈಕೋರ್ಟ್‌ಗಳಲ್ಲಿರುವ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾವಣೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ’ ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಹೇಳಿದರು.

ಪ್ರತಿಕ್ರಿಯಿಸಿ (+)