ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿ ದಾಳಿ: ವಿವಿ ಮಿನರಲ್ಸ್‌ ಗ್ರೂಪ್‌ಗೆ ಸೇರಿದ ನೂರಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

Last Updated 25 ಅಕ್ಟೋಬರ್ 2018, 4:34 IST
ಅಕ್ಷರ ಗಾತ್ರ

ಚೆನ್ನೈ: ವಿವಿ ಮಿನರಲ್ಸ್‌ ಹಾಗೂ ಅದರ ಮಾಲೀಕ ಎಸ್‌. ವೈಕುಂಡರಾಜನ್‌ ಅವರಿಗೆ ಸೇರಿದ ನೂರಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ವಿವಿ ಮಿನರಲ್ಸ್‌ನಿಂದಅಕ್ರಮವಾಗಿ ನಿಷೇಧಿತ ಖನಿಜ ಹಾಗೂ ಹಣವನ್ನು ವಿದೇಶಗಳಿಗೆ ವರ್ಗಾವಣೆ ಮಾಡುತ್ತಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿಲಭ್ಯವಾಗಿತ್ತು.

ಗುಪ್ತಚರ ಇಲಾಖೆ ಅಧಿಕಾರಿಗಳ ಮಾಹಿತಿ ಆಧರಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ. ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಈ ಕಂಪನಿಯು 1989ರಲ್ಲಿ ಸ್ಥಾಪನೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT