ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯಲಲಿತಾಗೆ ಚಿಕಿತ್ಸೆ: ಆಯೋಗದ ವಿರುದ್ಧ ದೂರು

ಹೈಕೋರ್ಟ್‌ ಮೊರೆ ಹೋದೆ ಅಪೊಲೊ ಆಸ್ಪತ್ರೆ
Last Updated 9 ಫೆಬ್ರುವರಿ 2019, 17:29 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ಆಯೋಗವು ಚಿಕಿತ್ಸೆಯ ಬಗ್ಗೆ ಪರಿಶೀಲಸುವುದನ್ನು ನಿಲ್ಲಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಅಪೊಲೊ ಆಸ್ಪತ್ರೆ ಮದ್ರಾಸ್‌ ಹೈಕೋರ್ಟ್‌ಗೆ ಮೊರೆ ಹೋಗಿದೆ.

ಆಸ್ಪತ್ರೆ ಬಗ್ಗೆ ತನಿಖಾ ಆಯೋಗವು ಪೂರ್ವಗ್ರಹ ಪೀಡಿತವಾಗಿದೆ ಎಂದು ಅದು ದೂರಿದೆ.ನ್ಯಾಯಮೂರ್ತಿ ಎ. ಆರ್ಮುಗಸ್ವಾಮಿ ತನಿಖಾ ಆಯೋಗದ ವ್ಯಾಪ್ತಿಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಿರುವುದನ್ನು ಸಹ ಪರಿಶೀಲನೆ ನಡೆಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿರುವುದನ್ನು ತೆಗೆದು ಹಾಕಬೇಕು ಎಂದು ಆಸ್ಪತ್ರೆ ಕೋರಿದೆ.

ಪ್ರಸ್ತುತ ಪ್ರಕರಣದಲ್ಲಿ ಆಯೋಗವು ಸುಳ್ಳು ಆರೋಪ ಮಾಡುವವರ ಪರ ವಹಿಸುತ್ತಿದೆ. ಜತೆಗೆ, ಅಸಮರ್ಪಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT