ಸೋಮವಾರ, ಜನವರಿ 20, 2020
24 °C

ಬಂಧಿತ ಪೊಲೀಸ್‌ ಅಧಿಕಾರಿ ಮನೆಯಲ್ಲಿ ಶೋಧ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ : ಉಗ್ರರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಡಿವೈಎಸ್‌ಪಿ ಪಿ. ದೇವಿಂದರ್‌ ಸಿಂಗ್‌ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸೋಮವಾರ ಪೊಲೀಸರು ಮಾಹಿತಿ ನೀಡಿದ್ದಾರೆ. 

ಇಂದಿರಾ ನಗರದಲ್ಲಿರುವ ಅಧಿಕಾರಿಯ ಮನೆಯಲ್ಲಿ ಸಾಕ್ಷ್ಯಗಳ ಹುಡುಕಾಟ ನಡೆಸಲಾಯಿತು. ಸಿಂಗ್‌ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ವಶಪಡಿಸಿಕೊಂಡ ದಾಖಲೆ ಮತ್ತು ವಸ್ತುಗಳ ಕುರಿತು ಯಾವುದೇ ಮಾಹಿತಿಯನ್ನು ನೀಡಲು ಅವರು ನಿರಾಕರಿಸಿದ್ದಾರೆ. 

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಪೊಲೀಸ್‌ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದ ಸಿಂಗ್‌ ಅವರು, ಶನಿವಾರ ದಕ್ಷಿಣ ಕಾಶ್ಮೀರದಲ್ಲಿ ಹಿಜ್ಬುಲ್‌ ಮುಜಾಯಿದ್ದೀನ್‌ ಉಗ್ರರಾದ ನವೀದ್ ಬಾಬು ಮತ್ತು ಅಲ್ತಾಫ್‌ ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದರು.   

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು