ಸೋಮವಾರ, ಸೆಪ್ಟೆಂಬರ್ 16, 2019
22 °C

ಪುಲ್ವಾಮಾದಲ್ಲಿ ಎನ್‌ಕೌಂಟರ್‌: ಒಬ್ಬ ಉಗ್ರ ಬಲಿ

Published:
Updated:

ಶ್ರೀನಗರ: ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರ ಮೃತಪಟ್ಟಿದ್ದಾನೆ. 

ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆ ದಾಳಿ ನಡೆಸಿತ್ತು. ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆಯಿತು. 

ಭದ್ರತಾ ಪಡೆಗಳು ಇವರೆಗೂ ಏಳು ಉಗ್ರರನ್ನು ಹೊಡೆದುರುಳಿಸಿವೆ. ಕಳೆದ ಮೂರು ದಿನಗಳಿಂದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ದಾಳಿ– ಪ್ರತಿದಾಳಿಗಳು ನಡೆಯುತ್ತಿವೆ. ಈ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತರಾಗಿದ್ದರು. 

ನಾಗರಿಕರೊಬ್ಬರು ಮೃತಪಟ್ಟಿರುವುದನ್ನು ವಿರೋಧಿಸಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಶುಕ್ರವಾರ ಬಂದ್‌ಗೆ ಕರೆ ನೀಡಿದ್ದರು. 

Post Comments (+)