ಆಂಧ್ರಪ್ರದೇಶ: 30ರಂದು ಜಗನ್‌ ಪ್ರಮಾಣವಚನ

ಮಂಗಳವಾರ, ಜೂನ್ 18, 2019
29 °C
ವಿಜಯವಾಡದಲ್ಲಿ ಪ್ರಮಾಣವಚನ, ತೆಲಂಗಾಣ ಸಿಎಂಗೂ ಆಹ್ವಾನ

ಆಂಧ್ರಪ್ರದೇಶ: 30ರಂದು ಜಗನ್‌ ಪ್ರಮಾಣವಚನ

Published:
Updated:
Prajavani

ಹೈದರಾಬಾದ್: ವೈಎಸ್‌ಆರ್‌ ಕಾಂಗ್ರೆಸ್‌ ಅಧ್ಯಕ್ಷ ಜಗನ್‌ಮೋಹನ್‌ ರೆಡ್ಡಿ ಅವರು ತನ್ನ ಪ್ರಮಾಣವಚನ ಸಮಾರಂಭಕ್ಕೆ ಚಂದ್ರಬಾಬುನಾಯ್ಡು ಅವರ ರಾಜಕೀಯ ವಿರೋಧಿ ಎನ್ನಲಾದ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ (ಕೆಸಿಆರ್‌) ಅವರನ್ನು ಆಹ್ವಾನಿಸಿದ್ದು, ನೆರೆ ರಾಜ್ಯದ ಜತೆಗೆ ಉತ್ತಮ ಬಾಂಧವ್ಯದ ಸೂಚನೆ ನೀಡಿದ್ದಾರೆ.

ವೈಎಸ್‌ಆರ್‌ಸಿ ಶಾಸಕಾಂಗ ಪಕ್ಷದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಅವರು ರಾಜ್ಯಪಾಲರನ್ನು  ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ನಂತರ ಕೆಸಿಆರ್‌ ಮನೆಗೆ ತೆರಳಿ, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದರು. ಭಾನುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಗನ್‌ ಭೇಟಿಮಾಡಲಿದ್ದಾರೆ.

‘ಜಗನ್‌ ಅವರು ಕೊಡು–ಕೊಳ್ಳುವ ಮನೋಭಾವದ ವ್ಯಕ್ತಿ. ಕೇಂದ್ರ ಸರ್ಕಾರ ಮತ್ತು ನೆರೆ ರಾಜ್ಯಗಳ ಜೊತೆಗೆ ಉತ್ತಮ ಬಾಂಧವ್ಯ ಹೊಂದಲು ಬಯಸಿದ್ದಾರೆ’ ಎಂದು ವೈಎಸ್‌ಆರ್‌ಸಿ ಹಿರಿಯ ನಾಯಕ ಉಮ್ಮಾರೆಡ್ಡಿ ವೆಂಕಟೇಶ್ವರಲು ಹೇಳಿದ್ದಾರೆ.

ಇದಕ್ಕೂ ಮುನ್ನ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು, ನಮ್ಮ ಮೇಲೆ ವಿಶ್ವಾಸವಿಟ್ಟು ಜನ ಬೆಂಬಲಿಸಿದ್ದಾರೆ.  2024ರಲ್ಲಿ ನಮ್ಮ ಸಾಧನೆಗಳಿಂದ ಇನ್ನೂ ಹೆಚ್ಚಿನ ಸ್ಥಾನ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡ
ಬೇಕು ಎಂದರು. 

ಪ್ರಮಾಣ ವಚನ ಸ್ವೀಕಾರ ಸಮಾರಂಭ 30ರಂದು ವಿಜಯವಾಡದಲ್ಲಿ ನಡೆಯಲಿದೆ.

‘ಅಮರಾವತಿ ಆದ್ಯತೆ ಅಲ್ಲ’

ಅಮರಾವತಿ: ‘ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ರೂಪಿಸಿರುವ ಒಂಬತ್ತು ಅಂಶಗಳ ‘ನವರತ್ನ’ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದೇ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಆದ್ಯತೆಯಾಗಿದೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !