ಅಮರಾವತಿ: ಆಡಳಿತ ವಿಕೇಂದ್ರೀಕರಣ ಉದ್ದೇಶದಿಂದ ಮೂರು ರಾಜಧಾನಿಗಳನ್ನು ಮಾಡುವ ‘ಆಂಧ್ರ ಪ್ರದೇಶ ವಿಕೇಂದ್ರಿಕರಣ ಮತ್ತು ಎಲ್ಲಾ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಸೂದೆ–2020’ ಅನ್ನು ಆಂಧ್ರ ಪ್ರದೇಶದ ವಿಧಾನಸಭೆ ಅಧಿವೇಶನದಲ್ಲಿ ಸೋಮವಾರ ಮಂಡಿಸಲಾಯಿತು.

ಈ ಮಸೂದೆ ಪ್ರಕಾರ ಅಮರಾವತಿಯನ್ನು ಶಾಸಕಾಂಗ ರಾಜಧಾನಿಯನ್ನಾಗಿ, ವಿಶಾಖಪಟ್ಟಣವನ್ನು ಕಾರ್ಯಾಂಗ ರಾಜಧಾನಿಯನ್ನಾಗಿ ಹಾಗೂ ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡಲು ಉದ್ದೇಶಿಸಲಾಗಿದೆ. ರಾಜ್ಯವನ್ನು ವಿವಿಧ ವಲಯಗಳನ್ನಾಗಿ ವಿಭಾಗಿಸುವುದು, ವಲಯ ಅಭಿವೃದ್ಧಿ ಯೋಜನೆ ಮತ್ತು ಅಭಿವೃದ್ಧಿ ಮಂಡಳಿಗಳ ಸ್ಥಾಪನೆಬಗ್ಗೆಯೂ ಮಸೂದೆಯಲ್ಲಿ ವಿವರಿಸಲಾಗಿದೆ.

ಅಧಿವೇಶನಕ್ಕೂಮುನ್ನ ಜಗನ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕರಡು ಮಸೂದೆ ಅಂಗೀಕಾರಗೊಂಡಿತು. ಜೊತೆಗೆ ರಾಜಧಾನಿಗೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ತಜ್ಞರಸಮಿತಿಯ ಶಿಫಾರಸುಗಳಿಗೂ ಸಂಪುಟ ಸಮ್ಮತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.