ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಷ್‌ ಎ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್‌ ಸೋದರಳಿಯನ ಹತ್ಯೆಗೈದ ಭಾರತೀಯ ಸೇನೆ

Last Updated 31 ಅಕ್ಟೋಬರ್ 2018, 4:55 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರಗಾಮಿ ಸಂಘಟನೆ ಜೈಷ್‌ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನ ಸೋದರಳಿಯ ಸೇರಿದಂತೆ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿದೆ.

ಮೃತ ಉಗ್ರನನ್ನು ಉಸ್ಮಾನ್ ಹೈದರ್ ಎಂದು ಗುರುತಿಸಲಾಗಿದೆ. ಈ ಹಿಂದೆ ಭದ್ರತಾ ಪಡೆಯ ಮೇಲೆ ಹಲವು ಬಾರಿ ದಾಳಿ ನಡೆಸಿದ್ದ ಈತನಿಗಾಗಿ ಹುಡುಕಾಟ ನಡೆದಿತ್ತು. ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾನೆ.

ದಾಳಿಗೆ ಬಳಸಿದ್ದ ಎಎಮ್–4 ಕಾರ್ಬಿನ್ ಸೇರಿದಂತೆ ಇನ್ನಷ್ಟು ಯುದ್ಧ ಸಾಮಾಗ್ರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT