ಶನಿವಾರ, ಜನವರಿ 25, 2020
28 °C

ಜಮ್ಮು–ಕಾಶ್ಮೀರ: ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು–ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ಖಾರಿ ತ್ರಯಾತ್ ಅರಣ್ಯ ಪ್ರದೇಶದಲ್ಲಿ ಬುಧವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಶಂಕಿತ ಉಗ್ರರು ಅವಿತಿದ್ದಾರೆ ಎಂಬ ಮಾಹಿತಿ ಮೇರೆಗೆ ಶೋಧ ಕಾರ್ಯ ಕೈಗೊಂಡ ವೇಳೆ ಗುಂಡಿನ ಚಕಮಕಿ ನಡೆದಿದೆ. ಉಗ್ರ ನಿಗ್ರಹ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದು, ಸೇನೆಯೂ ಪ್ರತಿ ದಾಳಿ ನಡೆಸಿದೆ. ಶೋಧ ಕಾರ್ಯ ಮುಂದುವರಿದಿದೆ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು–ಕಾಶ್ಮೀರದಲ್ಲಿ 2019ರಲ್ಲಿ 160 ಉಗ್ರರನ್ನು ಹತ್ಯೆ ಮಾಡಲಾಗಿದ್ದು, 102 ಭಯೋತ್ಪಾದಕರನ್ನು ಬಂಧಿಸಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು