ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರ: ಸಂವಹನ ನಿರ್ಬಂಧ ತೆರವು ಕೋರಿ ಅರ್ಜಿ

Last Updated 27 ಆಗಸ್ಟ್ 2019, 20:26 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ಸ್ಥಗಿತಗೊಳಿಸಲಾಗಿರುವ ಮೊಬೈಲ್, ಇಂಟರ್‌ನೆಟ್‌ ಮತ್ತು ಸಾರ್ವಜನಿಕ ಸಂವಹನ ಸೇವೆಯನ್ನು ಮರು ಸ್ಥಾಪಿಸಲು ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಈ ಸಂಬಂಧ ನಗರದಲ್ಲಿ ನೆಲೆಸಿ ರುವ, ಸೈಯದ್‌ ಪೀರ್‌ಜಾದಾ ಸುಹೇಲ್‌ ಅಹಮದ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್‌ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗ ಳವಾರ ವಿಚಾರಣೆಗೆ ಕೈಗೆತ್ತಿಕೊಂಡಿತು.

ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಿದೆ.

‘ಸಂವಹನ ಮಾಧ್ಯಮ ನಿಯಂತ್ರಿಸಿ ರುವ ಸರ್ಕಾರದ ಕ್ರಮ ಅಸಾಂವಿಧಾನಿಕವಾಗಿದೆ. ಈ ಮೂಲಕ ಸಾರ್ವಜನಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದರೂ ಸಂಪರ್ಕ ಸಾಧನಗಳ ಬಳಕೆಗೆ ವಿಧಿಸಿರುವ ನಿರ್ಬಂಧ ತೆರವುಗೊಳಿಸಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT