ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳು ತಿಂಗಳ ನಂತರ ಬಂಧಮುಕ್ತರಾಗಲಿದ್ದಾರೆ ಫಾರೂಕ್ ಅಬ್ದುಲ್ಲಾ

Last Updated 13 ಮಾರ್ಚ್ 2020, 11:12 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಬಂಧಮುಕ್ತಗೊಳಿಸಲು ಜಮ್ಮು ಕಾಶ್ಮೀರ ಸರ್ಕಾರ ತೀರ್ಮಾನಿಸಿದೆ.

370ನೇ ವಿಧಿ ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡ ಹೊತ್ತಲ್ಲಿ ಫಾರೂಕ್ ಅಬ್ದುಲ್ಲಾ ಅವರನ್ನು ಬಂಧನದಲ್ಲಿಡಲಾಗಿತ್ತು. 2019 ಆಗಸ್ಟ್ 4 ರಿಂದ ಇಲ್ಲಿಯವರೆಗೆ ಅಂದರೆ ಏಳು ತಿಂಗಳು ಫಾರೂಕ್ ಅಬ್ದುಲ್ಲಾ ಅವರು ಬಂಧನದಲ್ಲಿದ್ದರು.

ಕೇಂದ್ರ ಸರ್ಕಾರ ಆಗಸ್ಟ್ 5ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿತ್ತು. ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಫಾರೂಕ್ ಅಬ್ದುಲ್ಲಾ ಸೇರಿದಂತೆ,ಒಮರ್ ಅಬ್ದುಲ್ಲಾ , ಪಿಡಿಪಿ ನಾಯಕಿ ಮೆಹಬೂಬ ಮುಫ್ತಿ ಅವರನ್ನು ಬಂಧಿಸಲಾಗಿತ್ತು.

ಜಮ್ಮು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಬಂಧಮುಕ್ತಗೊಳಿಸಬೇಕೆಂದು ವಿಪಕ್ಷಗಳು ಒತ್ತಾಯಿಸಿದ್ದವು. ಜಮ್ಮು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳು ಮತ್ತು ಇತರ ನಾಯಕರನ್ನು ತಕ್ಷಣವೇ ಬಿಡುಗಡೆ ಮಾಡಬೇಕುಎಂದು ವಿಪಕ್ಷಗಳ ಹೇಳಿಕೆಯನ್ನು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಟ್ವೀಟ್ ಮಾಡಿದ್ದರು.


ಮೋದಿ ಸರ್ಕಾರವು ಒತ್ತಾಯಪೂರ್ವಕ ಪ್ರಜಾಪ್ರಭುತ್ವವಾದಿಗಳ ಬಾಯಿಮುಚ್ಚಿಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು.ಫಾರೂಕ್ ಅಬ್ದುಲ್ಲಾ ಅವರನ್ನು ಸುದೀರ್ಘ ಕಾಲ ಬಂಧನದಲ್ಲಿಡುವ ಮೂಲಕ ಕೇಂದ್ರ ಸರ್ಕಾರ ಕಾಶ್ಮೀರದ ಪ್ರಾತಿನಿಧ್ಯವನ್ನುಅವಮಾನಿಸುತ್ತಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಹೇಳಿತ್ತು.

ಜಮ್ಮು ಮತ್ತು ಕಾಶ್ಮೀರದ ನಾಗರಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ(ಪಿಎಸ್‌ಎ) ಅಡಿಯಲ್ಲಿ ಬಂಧಿತರಾಗಿದ್ದ ಫಾರೂಕ್ ಅಬ್ದುಲ್ಲಾ ಅವರನ್ನು ಬಂಧಮುಕ್ತಗೊಳಿಸಲು ಶ್ರೀನಗರದ ಜಿಲ್ಲಾಮೆಜಿಸ್ಟ್ರೇಟ್ ಶುಕ್ರವಾರ ಆದೇಶ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT