ಮಂಗಳವಾರ, ಮಾರ್ಚ್ 9, 2021
23 °C

ಇದು ಸಾಕಷ್ಟು ಯೋಚಿಸಿ ತೆಗೆದುಕೊಂಡ ನಿರ್ಧಾರ: ನಿರ್ಮಲಾ ಸೀತಾರಾಮನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಆರ್ಟಿಕಲ್‌ 370 ರದ್ದುಗೊಳಿಸಲು ಕೇಂದ್ರ ಸರ್ಕಾರ ಕೈಗೊಂಡಿರುವ ತೀರ್ಮಾನ ಸಾಕಷ್ಟು ಯೋಚಿಸಿ ತೆಗೆದುಕೊಂಡ ನಿರ್ಧಾರವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

‘ಜನಸಂಘದ ಕಾಲದಿಂದಲೂ ಬಿಜೆಪಿ ಏಕರೂಪ ನಾಗರಿಕ ಸಂಹಿತೆಗೆ ಬದ್ಧವಾಗಿದೆ. ಇದು ಹತ್ತಾರು ವರ್ಷಗಳಿಂದ ಚರ್ಚೆಯಲ್ಲಿರುವ ವಿಚಾರ. ಶ್ಯಾಮ ಪ್ರಸಾದ್ ಮುಖರ್ಜಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಅನುಮಾನಾಸ್ಪದವಾಗಿ ಅವರು ನಿಧನರಾದರು. ಸತತ ಚರ್ಚೆ, ಸಮಾಲೋಚನೆಯಿಂದಲೇ ಬಿಜೆಪಿ ಈ ವಿಚಾರವನ್ನು ಮುನ್ನೆಲೆಗೆ ತಂದಿದೆ. ಈ ವಿಚಾರದಲ್ಲಿ ಚರ್ಚೆ ನಡೆಸಿಲ್ಲ ಎನ್ನುವ ಪ್ರತಿಪಕ್ಷಗಳ ಆರೋಪ ನಿರಾಧಾರ’ ಎಂದು ಹೇಳಿದರು. 

ರಾಜ್ಯಸಭೆಯಲ್ಲಿ ಇಂದು ನಡೆಯುತ್ತಿರುವ ಈ ಚರ್ಚೆ ಐತಿಹಾಸಿಕವಾದುದು. ಹಲವು ವರ್ಷಗಳಿಂದ ದೇಶ ಈ ದಿನಕ್ಕಾಗಿ ಕಾಯುತ್ತಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಅಂಗವಾಗಿಸುವ ಈ ಕ್ಷಣಕ್ಕಾಗಿ ದೇಶ ಕಾಯುತ್ತಿತ್ತು ಎಂದು ಅವರು ನುಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು