ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮ ದಾಳಿಗೆ ಮೂರು ವರ್ಷ: ಏನೆಲ್ಲ ಆಗಿತ್ತು ಅಂದು?

Last Updated 14 ಫೆಬ್ರುವರಿ 2022, 4:11 IST
ಅಕ್ಷರ ಗಾತ್ರ

ಪುಲ್ವಾಮಾ ಬಾಂಬ್‌ ಸ್ಫೋಟ ನಡೆದು ಇಂದಿಗೆ (ಫೆ.14) ಮೂರು ವರ್ಷವಾಗಿದೆ.40 ಜನ ಸೈನಿಕರನ್ನು ಬಲಿ ತೆಗೆದುಕೊಂಡಿದ್ದ ಅದು ಭಾರತದ ಪಾಲಿಗೆ ಕಹಿನೆನಪು. ಅಂದು ಏನೆಲ್ಲಾ ಆಗಿತ್ತು, ಇಲ್ಲಿದೆ ಆ ಭೀಕರ ಘಟನೆಯ ನೆನಪು...

***

ಜಮ್ಮು ಕಾಶ್ಮೀರದ ಪುಲ್ವಾಮದ ಅವಂತಿಪುರದಲ್ಲಿ ಉಗ್ರರು ನಡೆಸಿದ್ದ ಬಾಂಬ್ ಸ್ಫೋಟದಲ್ಲಿ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾಗಿದ್ದರು. ಈ ವಿಷಯವನ್ನು ಮೊದಲು ಅಧಿಕೃವಾಗಿ ಒಪ್ಪಿಕೊಂಡಿದ್ದುಜಮ್ಮು ಮತ್ತು ಕಾಶ್ಮೀರ ಸರ್ಕಾರದಸಲಹೆಗಾರರಾಗಿದ್ದ ಕೆ.ವಿಜಯ್‌ ಕುಮಾರ್‌.

ಪಾಕಿಸ್ತಾನದ ಜೈಷ್‌–ಇ– ಮೊಹಮ್ಮದ್‌ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿತ್ತು. ಮಾತ್ರವಲ್ಲದೆ ದಾಳಿಯ ನಡೆಸಿದ್ದಾಗಿ ಸಂಘಟನೆ ಕಾಶ್ಮೀರ ಸುದ್ದಿ ಸಂಸ್ಥೆ ಜಿಎನ್‌ಎಸ್‌ಗೆ ಸಂದೇಶವೊಂದನ್ನು ಕಳುಹಿಸಿತ್ತು. ಒಟ್ಟು 70 ವಾಹನಗಳಲ್ಲಿ2500 ಸಿಆರ್‌ಪಿಎಫ್ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಈ ವಾಹನ ಸಾಲಿನಲ್ಲಿ ನಿರ್ದಿಷ್ಟ ಬಸ್‌ ಒಂದರ ಬಳಿಗೆ ಸ್ಫೋಟಕ ತುಂಬಿದ್ದ ಕಾರು ತರುವಲ್ಲಿ ಯಶಸ್ವಿಯಾಗಿದ್ದ ಉಗ್ರ, ಅದನ್ನು ಸ್ಫೋಟಿಸಿದ್ದ.

(ದಾಳಿಗೆ ಒಳಗಾದ ವಾಹನ ಸಂಖ್ಯೆ ಎಚ್ಆರ್‌ 49 ಎಫ್‌ 0637ನಲ್ಲಿ ಪ್ರಯಾಣಿಸುತ್ತಿದ್ದ 42 ಯೋಧರ ಪಟ್ಟಿ)

2004ರಲ್ಲಿ ಉಗ್ರರು ನಡೆಸಿದ್ದ ದಾಳಿಯೊಂದರ ಸಂದರ್ಭಗಡಿ ಭದ್ರತಾ ಪಡೆಯ 28 ಯೋಧರು ಹುತಾತ್ಮರಾಗಿದ್ದರು. ಅದಾದ ನಂತರನಡೆದ ದೊಡ್ಡ ಮಟ್ಟದ ದಾಳಿ ಇದು.

‘ಜಮ್ಮು ಕಾಶ್ಮೀರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ಸ್ಫೋಟದ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಸಿಆರ್‌ಪಿಎಫ್‌ನ ಐಜಿ ಜುಲ್ಫಿಕರ್‌ ಹಸನ್‌ ತಿಳಿಸಿದ್ದರು.

ಉಗ್ರು ದಾಳಿ ನಡೆಸಿದ ಸ್ಥಳದಲ್ಲಿ ವಾಹನ ಚೆಲ್ಲಾಪಿಲ್ಲಿಯಾಗಿರುವುದು. ಚಿತ್ರ: ಪಿಟಿಐ

ಹೀನ ಕೃತ್ಯ ಸಹಿಸಲ್ಲ; ಇಡೀ ದೇಶ ಯೋಧರಿಗೆ ಹೆಗಲು ಕೊಟ್ಟು ನಿಲ್ಲುತ್ತದೆ: ಮೋದಿ
ಪುಲ್ವಾಮದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ನಡೆಸಿದ ದಾಳಿಯು ಹೀನ ಕೃತ್ಯ. ಈ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ಕಚ್ಚೆದೆಯ ಭದ್ರತಾಪಡೆ ಸಿಬ್ಬಂದಿಯ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ. ಇಡೀ ದೇಶ ಕೆಚ್ಚೆದೆಯ ಯೋಧರು ಮತ್ತು ಅವರ ಕುಟುಂಬಕ್ಕೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದರು.

ಘಟನೆ ಮತ್ತು ಪರಿಸ್ಥಿತಿಯ ಕುರಿತಂತೆ ಗೃಹ ಸಚಿವ ರಾಜನಾಥ ಸಿಂಗ್‌ ಮತ್ತು ಹಿರಿಯ ಅಧಿಕಾರಿಗಳ ಮಾತನಾಡಿದ್ದೇನೆ ಎಂದು ನರೇಂದ್ರ ಮೋದಿ ಮತ್ತೊಂದು ಟ್ವೀಟ್‌ ಮಾಡಿದ್ದರು.

ಘಟನೆ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಅವರು ಸಿಆರ್‌ಪಿಎಫ್‌ನ ಡಿಜಿ ಆರ್‌.ಆರ್‌. ಭಟ್ನಾಗರ್‌ ಹಾಗೂ ಜಮ್ಮು ಕಾಶ್ಮೀರ ರಾಜ್ಯಪಾಲರಿಂದಮಾಹಿತಿ ಪಡೆದಿದ್ದರು. ಪಟ್ನಾದಲ್ಲಿ ನಡೆಯುಬೇಕಿದ್ದ ರ‍್ಯಾಲಿ ರದ್ದುಗೊಳಿಸಿ ಶ್ರೀನಗರಕ್ಕೆ ಭೇಟಿ ನೀಡಿದ್ದರು.

ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಜಮ್ಮು ಕಾಶ್ಮೀರ ರಾಜ್ಯಪಾಲರು ಸೂಚಿಸಿದ್ದಾರೆ ಎಂದು ರಾಜಭವನದ ವಕ್ತಾರರು ತಿಳಿಸಿದ್ದರು

ದಾಳಿಗೆ ಪಿಡಿಪಿ ಮುಖ್ಯಸ್ಥೆ,ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು, 12 ಯೋಧರು ಹುತಾತ್ಮರಾಗಿ, ಹಲವರು ಗಾಯಗೊಂಡಿರುವ ಸುದ್ದಿ ತಿಳಿದು ಆಘಾತವಾಯಿತು. ದಾಳಿ ಅತ್ಯಂತಖಂಡನೀಯ ಎಂದು ಹೇಳಿದ್ದರು.

ಉಗ್ರರ ದಾಳಿಗೆ ನ್ಯಾಷನಲ್‌ ಕಾನ್ಫರೆನ್ಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾ ಅವರು ಖಂಡನೆ ವ್ಯಕ್ತಪಡಿಸಿದ್ದರು.

ಪುಲ್ವಾಮಾಗೆ ಬಾಲಾಕೋಟ್ ಪ್ರತೀಕಾರ

ಪುಲ್ವಾಮಾ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತೀಯ ವಾಯುಪಡೆ ಫೆ.26ರಂದು ಪಾಕಿಸ್ತಾನದ ಬಾಲಾಕೋಟ್‌ನಲ್ಲಿದ್ದ ಉಗ್ರರ ನೆಲೆಗಳ ಮೇಲೆ ಬಾಂಬ್‌ ದಾಳಿ ನಡೆಸಿತ್ತು. ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೋಡ ಆವರಿಸಿತ್ತು. ನಂತರದ ದಿನಗಳಲ್ಲಿ ಏನೆಲ್ಲಾ ಆಯಿತು ಎನ್ನುವುದು ಈಗ ಇತಿಹಾಸ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT