ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ | 370 ರದ್ದಾದ ಬಳಿಕ ಶಾಲೆ ಪುನರಾರಂಭ, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಕೆ

Last Updated 9 ಆಗಸ್ಟ್ 2019, 10:00 IST
ಅಕ್ಷರ ಗಾತ್ರ

ಶ್ರೀನಗರ:ಜಮ್ಮು ಮತ್ತು ಕಾಶ್ಮಿರಕ್ಕೆ ವಿಶೇಷ ಸ್ಥಾನ ನೀಡಿದ್ದ 370 ವಿಧಿ ರದ್ದುಗೊಳಿಸಿ, ರಾಜ್ಯ ವಿಭಜನೆ ಮಾಡಿ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಣೆ ಮಾಡಿದ ಬಳಿಕ, ಕಣಿವೆ ನಾಡಿನಲ್ಲಿ ಬಿಗುವಿನ ವಾತಾವರಣ ತಿಳಿಯಾಗುತ್ತಿದೆ. ಶುಕ್ರವಾರ ಶಾಲೆಗಳು ಪುನರಾರಂಭವಾಗಿದ್ದು, ಮಸೀದಿಗಳಲ್ಲಿ ಜನ ಪ್ರಾರ್ಥನೆ ಸಲ್ಲಿಸಿದ್ದಾರೆ.

ಕಥುವಾದಲ್ಲಿ ಶುಕ್ರವಾರ ಬೆಳಿಗ್ಗೆ ಶಾಲೆ ಪುನರಾರಂಭವಾಗಿವೆ. ಪೋಷಕರು ಮಕ್ಕಳನ್ನು ಶಾಲೆಗೆ ಕರೆತಂದರು. ವಿದ್ಯಾರ್ಥಿಗಳು ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದಾರೆ.

ಶುಕ್ರವಾರದ ಪ್ರಾರ್ಥನೆ ಸಲ್ಲಿಕೆ

ಮುಸ್ಲಿಂ ಸಮಾಜದ ಜನರು ಶುಕ್ರವಾರ ಮಸೀದಿಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು ಎಂದು ಎಎನ್‌ಐ ಟ್ವೀಟ್‌ ಮಾಡಿದೆ.

370 ವಿಧಿ ರದ್ದುಗೊಳಿಸುವುದಕ್ಕೂ ಮೊದಲು ಮುನ್ನೆಚ್ಚರಿಕೆ ಕ್ರಮವಾಗಿಭದ್ರತೆ ದೃಷ್ಟಿಯಿಂದ ಹೆಚ್ಚಿನ ಸೇನೆಯನ್ನು ನಿಯೋಜಿಸಲಾಗಿತ್ತು. ಅಗತ್ಯವಿದ್ದಕಡೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು. ಈಗ ಜನಜೀವನ ಸಜ ಸ್ಥಿತಿಗೆ ಮರಳುತ್ತಿದ್ದು, ಗುರುವಾರ ಮನೆಯಿಂದ ಹೊರ ಬಂದ ನಾಗರಿಕರು ಅಗತ್ಯ ವಸ್ತುಗಳನ್ನು ಖರೀದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT