ಶುಕ್ರವಾರ, ಫೆಬ್ರವರಿ 28, 2020
19 °C

ಕಾಶ್ಮೀರ: ಐವರು ಉಗ್ರರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಗಣರಾಜ್ಯೋತ್ಸವ ದಿನದಂದು ದಾಳಿ ನಡೆಸಲು ಸಂಚು ರೂಪಿಸಿದ್ದ ಜೈಷೆ ಮೊಹಮ್ಮದ್‌ನ ಐವರು ಉಗ್ರರನ್ನು ಬಂಧಿಸಿದ್ದು, ದಾಳಿಗೆ ಬಳಸಲು ಸಿದ್ಧಪಡಿಸಿದ್ದ ಸ್ಫೋಟಕ ಮಾದರಿಯನ್ನು ನಾಶಗೊಳಿಸಲಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ. 

‘ಶ್ರೀನಗರ ಪೊಲೀಸರು ಉಗ್ರರ ಸಂಚನ್ನು ವಿಫಲಗೊಳಿಸಿದ್ದಾರೆ. ಹಜರತ್‌ ಬಾಲ್‌ ಪ್ರದೇಶದಲ್ಲಿ ಎರಡು ಗ್ರೆನೇಡ್‌ಗಳನ್ನು ಇವರು ಸ್ಫೋಟಿಸಿದ್ದರು. ಗಣರಾಜ್ಯ ದಿನಕ್ಕೂ ಮುನ್ನ ಸಂಭವನೀಯ ದಾಳಿ ತಪ್ಪಿಸಲಾಗಿದೆ. ಐವರು ಉಗ್ರರಿಂದ ಭಾರಿ ಸ್ಫೋಟಕವನ್ನು ವಶಪಡಿಸಿ ಕೊಳ್ಳಲಾಗಿದೆ’ ಎಂದು ಕಾಶ್ಮೀರ ಪೊಲೀಸ್ ಇಲಾಖೆ ಟ್ವೀಟ್‌ ಮಾಡಿದೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು