ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ರೆಬನ್ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ನಿರ್ನಾಮಗೊಳಿಸಲಾಗಿದೆ’ ಎಂದು ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಹೇಳಿದ್ದಾರೆ.

‘ದಕ್ಷಿಣ ಕಾಶ್ಮೀರದ ಶೋಪಿಯಾನ್ನ ರೆಬನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿಯ ಮೇರೆಗೆ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು ಇಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದವು. ಈ ಸಮಯದಲ್ಲಿ ಉಗ್ರರು ಗುಂಡಿನ ಚಕಮಕಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಐವರು ಉಗ್ರರು ಸಾವನ್ನಪ್ಪಿದರು’ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘ಮೃತ ಉಗ್ರರ ಗುರುತು ಮತ್ತು ಅವರು ಯಾವ ಗುಂಪಿನೊಂದಿಗೆ ಸಂಬಂಧ ಹೊಂದಿದ್ದರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.