ಬುಧವಾರ, ಜನವರಿ 22, 2020
16 °C

ಅಸ್ಸಾಂನಲ್ಲಿ ಪ್ರತಿಭಟನೆ: ಜಪಾನ್ ಪ್ರಧಾನಿ ಶಿಂಜೊ ಅಬೆ ಭಾರತ ಪ್ರವಾಸ ಮುಂದೂಡಿಕೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪೌರತ್ವ (ತಿದ್ದುಪಡಿ) ಮಸೂದೆಯನ್ನು ಖಂಡಿಸಿ ಅಸ್ಸಾಂನಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರ ಭಾರತ ಪ್ರವಾಸ ಮುಂದೂಡಿಕೆಯಾಗಿದೆ.

‘ಜಪಾನ್ ಪ್ರಧಾನಿಯವರ ಪ್ರಸ್ತಾವಿತ ಭಾರತ ಪ್ರವಾಸವನ್ನು ಮುಂದೂಡಲಾಗಿದೆ. ಭೇಟಿಯ ಮುಂದಿನ ದಿನಾಂಕವನ್ನು ಉಭಯ ರಾಷ್ಟ್ರಗಳ ನಾಯಕರಿಗೆ ಅನುಕೂಲವಾಗುವಂತೆ ನಿರ್ಧರಿಸಲಾಗುವುದು’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೊಮೆನ್ ಅವರೂ ಭಾರತ ಭೇಟಿಯನ್ನು ರದ್ದುಪಡಿಸಿದ್ದರು.

ಶಿಂಜೊ ಅಬೆ ಅವರು ಡಿಸೆಂಬರ್ 15ರಿಂದ 17ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದು ಮೋದಿ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ರವೀಶ್ ಕುಮಾರ್ ಗುರುವಾರ ಹೇಳಿದ್ದರು. ಆದರೆ, ಮಾತುಕತೆಯ ಸ್ಥಳ ಯಾವುದು ಎಂಬುದನ್ನು ಸರ್ಕಾರ ಘೋಷಿಸಿರಲಿಲ್ಲ. ಆದಾಗ್ಯೂ, ಗುವಾಹಟಿಯಲ್ಲಿ ಸಿದ್ಧತೆ ನಡೆಸಲಾಗುತ್ತಿದೆ ಎನ್ನಲಾಗಿತ್ತು.

ಗುವಾಹಟಿಯ ಲಾಲುಂಗ್‌ಗಾಂವ್‌ನಲ್ಲಿ ಗುರುವಾರ ಕಲ್ಲು ತೂರಾಟ ನಡೆಸಿದ್ದ ಪ್ರತಿಭಟನಕಾರರ ಮೇಲೆ ಪೊಲೀಸರು ಗೋಲಿಬಾರ್‌ ನಡೆಸಿದ್ದರು. ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದು, ಹಲವು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು