ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಜತೆ ಸಮನ್ವಯ: ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ಸೂಚನೆ

Last Updated 19 ಮೇ 2019, 9:12 IST
ಅಕ್ಷರ ಗಾತ್ರ

ನವದೆಹಲಿ: ಮೈತ್ರಿ ಸರ್ಕಾರ ಮುಂದುವರಿಯುವ ನಿಟ್ಟಿನಲ್ಲಿ ಜೆಡಿಎಸ್ ಜೊತೆ ಸಮನ್ವಯದೊಂದಿಗೆ ಇರಬೇಕು ಎಂದು ಕಾಂಗ್ರೆಸ್ ರಾಜ್ಯ ಮುಖಂಡರಿಗೆ ಹೈಕಮಾಂಡ್ ಸೂಚಿಸಿದೆ.

ಇಲ್ಲಿನ ತುಘಲಕ್ ಲೇನ್‌ನಲ್ಲಿರುವ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತಿತರ ಮುಖಂಡರಿಗೆ ಈ ಸೂಚನೆ‌ ನೀಡಲಾಗಿದೆ.

ಸರ್ಕಾರಯ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಸಚಿವ‌ ಡಿ.ಕೆ. ಶಿವಕುಮಾರ ಅವರೊಂದಿಗೆ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ ಸಭೆಯಲ್ಲಿ ಹಾಜರಿದ್ದರು.

ಜೆಡಿಎಸ್ ಜೊತೆಗಿನ ಭಿನ್ನಾಭಿಪ್ರಾಯದ ಕುರಿತೂ ರಾಜ್ಯ ಮುಖಂಡರು ಸಭೆಯಲ್ಲಿ ಪ್ರಸ್ತಾಪಿಸಿದ್ದು, ಮೈತ್ರಿ ಸರ್ಕಾರ ಸುಸೂತ್ರವಾಗಿ ಮುಂದುವರಿಯುವ‌ ನಿಟ್ಟಿನಲ್ಲಿ ಯಾವುದೇ ರೀತಿಯ ವ್ಯತಿರಿಕ್ತ ಹೇಳಿಕೆ‌ ನೀಡದಂತೆ ರಾಹುಲ್ ಗಾಂಧಿ ತಾಕೀತು ಮಾಡಿದರು ಎಂದು ತಿಳಿದುಬಂದಿದೆ.

ಜೆಡಿಎಸ್ ಮುಖಂಡರೊಂದಿಗೆ ಸಮನ್ವಯ ಮುಂದುವರಿಸಬೇಕು ಎಂದು ವರಿಷ್ಠರು ಸೂಚಿಸಿದರು ಎಂದು ದಿನೇಶ‌ ಗುಂಡೂರಾವ್ ಅವರು ಸಭೆಯ ನಂತರ‌ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ ಮುಖಂಡರು ಯಾವುದೇ ರೀತಿಯ ಟೀಕೆಗಳನ್ನು ಮಾಡಬಾರದು ಎಂಬ ಸೂಚನೆಯನ್ನೂ ನೀಡಲಾಗಿದೆ ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲನಯಾವುದೇ ರೀತಿಯ ಚರ್ಚೆ ನಡೆದಿರಲಿಲ್ಲ. ಇದೀಗ ಸಭೆ ನಡೆಸಿ, ಮೈತ್ರಿಯಲ್ಲಿನ ಸಮಸ್ಯೆ ನಿವಾರಿಸಿಕೊಂಡು ಹೋಗಬೇಕಿದೆ ಎಂಬ ನಿರ್ಧಾರ ಕೈಗೊಳ್ಳಲಾಯಿತು ಎಂದು ಅವರು ತಿಳಿಸಿದರು‌.

ಮೈತ್ರಿಯ ಕುರಿತು ಕಾಂಗ್ರೆಸ್ ಮುಖಂಡರು ಭಿನ್ನಾಭಿಪ್ರಾಯ ಕಂಡುಬಂದರೆ ಸಹಿಸಲು ಸಾಧ್ಯವಿಲ್ಲ. ‌ಶಿಸ್ತು ಅಗತ್ಯ ಎಂದು ವರಿಷ್ಠರು ಹೇಳಿದ್ದಾರೆ. ಶಿಸ್ತು ಉಲ್ಲಂಘನೆಗೆ ಅವಕಾಶವಿಲ್ಲ. ಸರ್ಕಾರದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ಮೈತ್ರಿ ಸರ್ಕಾರ ಮುಂದುವರಿಯಲಿದೆ ಎಂದು ಅವರು ವಿವರಿಸಿದರು. ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1ರವರೆಗೆ ಸಭೆ‌ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT