ಗುರುವಾರ , ಡಿಸೆಂಬರ್ 3, 2020
20 °C
2020ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ

ಬಿಹಾರ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನದಲ್ಲಿ ಸ್ಪರ್ಧಿಸಲಿದೆ ಜೆಡಿಯು

ಪಿಟಿಐ Updated:

ಅಕ್ಷರ ಗಾತ್ರ : | |

ಪಟ್ನಾ: ಮುಂದಿನ ವರ್ಷ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಜೆಡಿಯು ಸ್ಪರ್ಧಿಸಲಿದೆ ಎಂದು ಜೆಡಿಯುನ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ. ಎನ್‌ಡಿಎಯಲ್ಲಿ ಜೆಡಿಯು ಪ್ರಮುಖ ಪಾಲುದಾರ ಪಕ್ಷವಾಗಿದೆ.

ಈ ವರ್ಷ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಸಮಾನ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು.

‘ನನ್ನ ಅಭಿಪ್ರಾಯದ ಪ‍್ರಕಾರ, ಲೋಕಸಭಾ ಚುನಾವಣಾ ಸೂತ್ರವನ್ನೇ ವಿಧಾನಸಭಾ ಚುನಾವಣೆಯಲ್ಲೂ ಅನುಸರಿಸಲಾಗದು‌‌‌’ ಎಂದು ‍ಪ್ರಶಾಂತ್‌ ಹೇಳಿದ್ದಾರೆ.

ಬಿಹಾರದಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದುಕೊಳ್ಳಲು ಎಲ್ಲಾ ಪ್ರಯತ್ನಗಳನ್ನೂ ಮಾಡುತ್ತಿದೆ. ನಿತೀಶ್‌ ಕುಮಾರ್‌ ಅವರ ಓಟಕ್ಕೆ ತಡೆಹಾಕಲು ಮುಂದಾಗಿದೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು