ಸೋಮವಾರ, ಸೆಪ್ಟೆಂಬರ್ 20, 2021
23 °C

ಬಿಹಾರ: ಜೆಡಿ(ಯು) ವಿದ್ಯಾರ್ಥಿ ನಾಯಕನಿಗೆ ಗುಂಡಿಕ್ಕಿ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಪಟ್ನಾ: ಹೋಳಿ ಆಚರಣೆಯ ಸಂದರ್ಭದಲ್ಲಿ ಜನತಾದಳ(ಯು) ಪಕ್ಷದ ವಿದ್ಯಾರ್ಥಿ ಘಟಕದ ನಾಯಕನನ್ನು ಮಂಗಳವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

ಹೋಳಿ ಹಬ್ಬದ ಅಂಗವಾಗಿ ಹಾಕಲಾಗಿದ್ದ ಪೋಸ್ಟರ್‌ನಲ್ಲಿ ತಮ್ಮ ಹೆಸರಿರಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಘಟಕದ ಮೂವರು ಸದಸ್ಯರು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದರು.  

‘ವಿದ್ಯಾರ್ಥಿ ನಾಯಕ ಕನ್ಹಯ್ಯ ಕೌಶಿಕ್‌ನನ್ನು ಮಂಗಳವಾರ ರಾತ್ರಿ ಪಟೇಲ್‌ ನಗರದ ಬಳಿ ಹತ್ಯೆ ಮಾಡಲಾಗಿದೆ. ಪ್ರಕರಣ ಸಂಬಂಧ ಅಮರ್‌ ಕಾಂತ್‌ ಝಾ ಮತ್ತು ಧರ್ಮೇಂದ್ರ ‌ಎಂಬುವವರನ್ನು ಬಂಧಿಸಲಾಗಿದೆ. ಕನ್ಹಯ್ಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗುತ್ತಿರುವ ಪ್ರಕರಣದ ಪ್ರಮುಖ ಆರೋಪಿ ಕುಶ್‌ ತಲೆಮರೆಸಿಕೊಂಡಿದ್ದಾನೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿ ರಾಜೇಶ್‌ ಸಿಂಗ್‌ ಪ್ರಭಾಕರ್‌ ತಿಳಿಸಿದರು. 

ಈ ಘಟನೆಯಲ್ಲಿ ಕನ್ಹಯ್ಯ ಸ್ನೇಹಿತನ ಮೇಲೆಯೂ ಕಿಡಿಕೇಡಿಗಳು ಗುಂಡು ಹಾರಿಸಿದ್ದರು. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ಕನ್ಹಯ್ಯ ಹತ್ಯೆ ಖಂಡಿಸಿ, ಆತನ ಬೆಂಬಲಿಗರು ಬುಧವಾರ ಪ್ರತಿಭಟನೆ ನಡೆಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು