ಬುಧವಾರ, ಡಿಸೆಂಬರ್ 8, 2021
18 °C

ಜೆಇಇ: ಫಲಿತಾಂಶ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಜನವರಿ ಮುಖ್ಯಪರೀಕ್ಷೆಯ ಫಲಿತಾಂಶ ಶನಿವಾರ ಪ್ರಕಟಗೊಂಡಿದೆ. ನಿಗದಿಗಿಂತ 12 ದಿನ ಮೊದಲೇ ಫಲಿತಾಂಶ ಪ್ರಕಟಿಸಲಾಗಿದೆ. 

jeemain.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಘಟಕ (ಎನ್‌ಟಿಎ) ಹೇಳಿದೆ. 

ಜೆಇಇ ಎರಡನೇ ಪತ್ರಿಕೆಯ ಮುಖ್ಯಪರೀಕ್ಷೆ ಏಪ್ರಿಲ್‌ನಲ್ಲಿ ನಡೆಯಲಿದ್ದು, ಫೆಬ್ರುವರಿ 8ರಿಂದ ಮಾರ್ಚ್‌ 7ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕಂಪ್ಯೂಟರ್‌ ಆಧಾರಿತ ಮಾದರಿಯಲ್ಲಿ ಪರೀಕ್ಷೆ ಇದಾಗಿದ್ದು, ಏಪ್ರಿಲ್‌ 6ರಿಂದ 20ರವರೆಗೆ ನಡೆಯಲಿದೆ ಎಂದು ಎನ್‌ಟಿಎ ಹೇಳಿದೆ. 

ಮೊದಲನೆ ಪತ್ರಿಕೆಯ ಪರೀಕ್ಷೆ ಜನವರಿ 8ರಿಂದ 12ರವರೆಗೆ ನಡೆದಿತ್ತು. ದೇಶದ 467 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 9,29, 198 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 

‘15 ಅಭ್ಯರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ’ ಎಂದು ಎನ್‌ಟಿಎ ಪ್ರಕಟಣೆಯಲ್ಲಿ ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು