ಮಂಗಳವಾರ, ಏಪ್ರಿಲ್ 7, 2020
19 °C
ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

ಜೆಇಇ: 24 ವಿದ್ಯಾರ್ಥಿಗಳಿಗೆ ಶೇ 100 ಅಂಕ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಎಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶಕ್ಕೆ ನಡೆದ ಜಂಟಿ ಪ್ರವೇಶ ಮುಖ್ಯ ಪರೀಕ್ಷೆ (ಜೆಇಇ) ಫಲಿತಾಂಶವನ್ನು ನ್ಯಾಷನಲ್‌ ಟೆಸ್ಟಿಂಗ್‌ ಏಜೆನ್ಸಿ ಸೋಮವಾರ ಪ್ರಕಟಿಸಿದೆ. ಇದರಲ್ಲಿ 24 ವಿದ್ಯಾರ್ಥಿಗಳು ಶೇ 100 ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.

ಅತಿ ಹೆಚ್ಚು ಅಂಕ ಪಡೆದವರಲ್ಲಿ ಮೊದಲ ನಾಲ್ಕು ಸ್ಥಾನದಲ್ಲಿ ರಾಜಸ್ಥಾನ ಮತ್ತು ತೆಲಂಗಾಣದ ತಲಾ ಇಬ್ಬರು ಇದ್ದಾರೆ. ಮಧ್ಯಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಮೂವರು ಇನ್ನುಳಿದ ಸ್ಥಾನದಲ್ಲಿದ್ದಾರೆ. ದೆಹಲಿ, ಕರ್ನಾಟಕ, ಹರಿಯಾಣ ಮತ್ತು ಪಂಜಾಬ್‌ನ ವಿದ್ಯಾರ್ಥಿಗಳು ನಂತರದ ಸ್ಥಾನದಲ್ಲಿದ್ದಾರೆ.

ಇದೇ ಮೊದಲ ಬಾರಿಗೆ ಜೆಇಇ ಮುಖ್ಯ ಪರೀಕ್ಷೆಯನ್ನು ಈ ವರ್ಷದ ಜನವರಿ ಮತ್ತು ಏಪ್ರಿಲ್‌ನಲ್ಲಿ ಆನ್‌ಲೈನ್‌ನಲ್ಲಿ ನಡೆಸಲಾಗಿತ್ತು.

‘ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ ಎರಡೂ ಪರೀಕ್ಷೆಗಳನ್ನು ಬರೆದಿದ್ದರೆ ಯಾವುದರಲ್ಲಿ ಅತಿ ಹೆಚ್ಚು ಅಂಕ ಪಡೆದಿರುತ್ತಾರೊ ಅದನ್ನೇ ಪರಿಗಣಿಸಲಾಗುತ್ತದೆ. ಒಟ್ಟು 6.8 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದ್ದರು. ಇವರಲ್ಲಿ 2.97 ಲಕ್ಷ ಮಂದಿ ತಮ್ಮ ಸಾಮರ್ಥ್ಯ ಉತ್ತಮಪಡಿಸಿಕೊಂಡಿದ್ದಾರೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರ‍್ಯಾಂಕ್‌ ಅನ್ನೂ ಸಹ ಅತಿ ಹೆಚ್ಚು ಅಂಕ ಪಡೆದ ಪರೀಕ್ಷೆಯನ್ನೇ ಗಮನದಲ್ಲಿಟ್ಟುಕೊಂಡು ಪರಿಗಣಿಸಲಾಗುತ್ತದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು