ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನ್ಯಾಯಾಲಯದ ಸೂಚನೆಯಿದ್ದರೆ ಸಿಬಿಐಗೆ ಅನುಮತಿ ನಕಾರ ಸಲ್ಲದು’

Last Updated 7 ಫೆಬ್ರುವರಿ 2019, 19:34 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಯಾಲಯದ ಸೂಚನೆಯಂತೆ ಸಿಬಿಐ ತನಿಖೆ ನಡೆಸುವ ಅಧಿಕಾರಿಗಳಿಗೆ ರಾಜ್ಯಗಳು ಪ್ರವೇಶ ನಿರಾಕರಿಸುವಂತಿಲ್ಲ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಹೇಳಿದ್ದಾರೆ.

ಸಿಬಿಐ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡವೆ ಚಿಟ್‌ ಫಂಡ್‌ ಹಗರಣದ ತನಿಖೆಗೆ ಸಂಬಂಧಿಸಿ ನಡೆದ ಸಂಘರ್ಷದಿಂದಾಗಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ದೆಹಲಿ ವಿಶೇಷ ಪೊಲೀಸ್‌ ಕಾಯ್ದೆ 1946ರ ಅಡಿಯಲ್ಲಿ ಸಿಬಿಐ ಕಾರ್ಯನಿರ್ವಹಿಸುತ್ತಿದೆ. ಇದರ ಪ್ರಕಾರ, ರಾಜ್ಯಗಳಲ್ಲಿ ತನಿಖೆ ನಡೆಯಲು ರಾಜ್ಯ ಸರ್ಕಾರದ ಪೂರ್ವಾನುಮತಿ ಅಗತ್ಯ.

ಸಾಂವಿಧಾನಿಕ ನ್ಯಾಯಾಲಯಗಳು ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಬಹುದು. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಅನುಮತಿ ಅಗತ್ಯ ಇಲ್ಲ ಎಂದು ರಾಜ್ಯಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಸಿಂಗ್‌ ತಿಳಿಸಿದ್ದಾರೆ.ತನಿಖೆಗೆ ನೀಡಿದ ಅನುಮತಿಯನ್ನು ಪೂರ್ವಾನ್ವಯ ಆಗುವ ರೀತಿಯಲ್ಲಿ ರಾಜ್ಯಗಳು ಹಿಂದಕ್ಕೆ ಪಡೆಯುವುದಕ್ಕೂ ಅವಕಾಶ ಇಲ್ಲ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT