‘ದಕ್ಷಿಣ ಭಾರತದಲ್ಲಿ ಉಗ್ರರ ನೆಲೆ ವಿಸ್ತರಣೆ: ಎಚ್ಚರಿಕೆ

ಭಾನುವಾರ, ಜೂನ್ 16, 2019
28 °C

‘ದಕ್ಷಿಣ ಭಾರತದಲ್ಲಿ ಉಗ್ರರ ನೆಲೆ ವಿಸ್ತರಣೆ: ಎಚ್ಚರಿಕೆ

Published:
Updated:

ಗುವಾಹಟಿ: ಇಸ್ಲಾಮಿಕ್‌ ಉಗ್ರ ಸಂಘಟನೆ ಜಮಾತ್‌– ಉಲ್‌– ಮುಜಾಹಿದ್ದೀನ್‌ ಬಾಂಗ್ಲಾದೇಶ (ಜೆಎಂಬಿ) ಭಾರತ– ಬಾಂಗ್ಲಾದೇಶ ಗಡಿಯಲ್ಲಿ ಶಾಶ್ವತ ನೆಲೆ ಸ್ಥಾಪಿಸಲು ಹಾಗೂ ದಕ್ಷಿಣ ಭಾರತದಲ್ಲಿ ನೆಲೆ ವಿಸ್ತರಿಸಿಕೊಂಡು ಭಾರತ ಉಪಖಂಡದಲ್ಲಿ ಇಸ್ಲಾಮಿಕ್‌ ಪ್ರಾಂತ್ಯ ಸ್ಥಾಪಿಸುವ ಯೋಜನೆ ಹೊಂದಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. 

‘ಭಾರತ– ಬಾಂಗ್ಲಾದೇಶ ಗಡಿಯ ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರಾ ರಾಜ್ಯಗಳ ಗಡಿ ಜಿಲ್ಲೆಗಳ ಸಮೀಪ 10 ಕಿ.ಮೀ. ಒಳಗೆ ಶಾಶ್ವತ ನೆಲೆ ಸ್ಥಾಪಿಸಲು ಜೆಎಂಬಿ ಯೋಜನೆ ಹೊಂದಿರುವುದು ಇತ್ತೀಚಿನ ತನಿಖೆಗಳಿಂದ ಗೊತ್ತಾಗಿದೆ. ಜತೆಗೆ ದಕ್ಷಿಣ ಭಾರತದಲ್ಲೂ ತನ್ನ ಚಟುವಟಿಕೆ ವಿಸ್ತರಿಸಲು ಯೋಜನೆ ಹೊಂದಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಲ್ಲದೇ, ಕಾನೂನುಬಾಹಿರ (ಚಟುವಟಿಕೆಗಳನ್ನು ತಡೆಗಟ್ಟುವಿಕೆ) ಕಾಯ್ದೆ– 1967ರ ಅಡಿಯಲ್ಲಿ ಜೆಎಂಬಿ ಅನ್ನು ನಿಷೇಧಿತ ಪಟ್ಟಿಯಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಐಎಸ್‌ ಭಯೋತ್ಪಾದನೆ ನಿರ್ಮೂಲನೆಗೆ ಪಣ: ಶ್ರೀಲಂಕಾ ಪ್ರಧಾನಿ ರಾನಿಲ್‌ ವಿಕ್ರಮಸಿಂಘೆ

ಜಿಹಾದ್‌ ಮೂಲಕ ಇಸ್ಲಾಮಿಕ್‌ ಸಾಮ್ರಾಜ್ಯ ಸ್ಥಾಪನೆಯ ಗುರಿಯನ್ನಿಟ್ಟುಕೊಂಡು 1998ರಲ್ಲಿ ಬಾಂಗ್ಲಾದೇಶದಲ್ಲಿ ಜೆಎಂಬಿ ಅಸ್ತಿತ್ವಕ್ಕೆ ಬಂದಿದೆ. 

‘ಜೆಎಂಬಿಯು ಜಮಾತ್‌– ಉಲ್‌– ಮುಜಾಹಿದೀನ್‌ ಇಂಡಿಯಾ ಅಥವಾ ಜಮಾತ್‌– ಉಲ್‌– ಮುಜಾಹಿದ್ದೀನ್‌ ಹಿಂದೂಸ್ತಾನ ಎಂಬ ಹೆಸರಿನಲ್ಲಿ ಚಟುವಟಿಕೆ ನಡೆಸಲು ಯೋಚಿಸಿದೆ. ಭಯೋತ್ಪಾದನಾ ಚಟುವಟಿಕೆ, ಉಗ್ರ ಚಟುವಟಿಕೆಗೆ ಪ್ರಚೋದನೆ ನೀಡುವುದು, ಭಾರತದಲ್ಲಿ ಉಗ್ರ ಚಟುವಟಿಕೆಗಾಗಿ ಯುವಕರನ್ನು ನೇಮಕ ಮಾಡಿಕೊಳ್ಳುವುದು ಇದರ ಮುಖ್ಯ ಉದ್ದೇಶವಾಗಿದೆ. ಭಯೋತ್ಪಾದನಾ ಚಟುವಟಿಕೆಗೆ ಹಣ ಸಂಗ್ರಹಿಸುವಲ್ಲಿ ಮತ್ತು ಸ್ಫೋಟಕ ಖರೀದಿ ಮತ್ತು ಸುಧಾರಿತ ಸ್ಫೋಟಕ ವಸ್ತುಗಳನ್ನು ಬಳಸಿ ಬಾಂಬ್‌ ತಯಾರಿಸುವಲ್ಲಿ ಜೆಎಂಬಿ ಈಗಾಗಲೇ ತೊಡಗಿಸಿಕೊಂಡಿದೆ’ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಐ.ಎಸ್‌ ಬೆದರಿಕೆ ಕೇರಳದಲ್ಲಿ ಕಟ್ಟೆಚ್ಚರ

ಪಶ್ಚಿಮ ಬಂಗಾಳದ ಬುರ್ಧ್ವಾನ್‌ನಲ್ಲಿ 2014ರ ಅಕ್ಟೋಬರ್‌ 2 ರಂದು ನಡೆದ ಬಾಂಬ್‌ ಸ್ಫೋಟ ಮತ್ತು ಬಿಹಾರದ ಬೋಧ ಗಯಾದಲ್ಲಿ 2018ರ ಜನವರಿ 19 ರಂದು ನಡೆದ ಸ್ಫೋಟಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ನಡೆಸಿದ ಸಂದರ್ಭದಲ್ಲಿ ಜೆಎಂಬಿ ಭಾರತದೊಳಗೆ ಚಟುವಟಿಕೆ ನಡೆಸಲು ಯೋಜನೆ ಹೊಂದಿರುವುದು ಬೆಳಕಿಗೆ ಬಂದಿದೆ. ಐದು ಪ್ರಕರಣಗಳಲ್ಲಿ ಜೆಎಂಬಿ ಭಾಗಿಯಾಗಿರುವುದನ್ನು ಅಸ್ಸಾಂ ಪೊಲೀಸರು ಪತ್ತೆ ಹಚ್ಚಿದ್ದು, 55 ಮಂದಿಯನ್ನು ಬಂಧಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !