ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ವಿರೋಧಿ ಘೋಷಣೆ ಪ್ರಕರಣ: ಕನ್ಹಯ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಕೋರ್ಟ್‌

Last Updated 8 ಏಪ್ರಿಲ್ 2019, 13:56 IST
ಅಕ್ಷರ ಗಾತ್ರ

ನವದೆಹಲಿ:ದೇಶದ್ರೋಹ ಪ್ರಕರಣದಲ್ಲಿ ಆರೋಪಿಯಾಗಿರುವ ಕನ್ಹಯ್ಯಕುಮಾರ್‌ ಅವರ ವಿಚಾರಣೆಗೆ ಅನುಮತಿ ನೀಡುವ ಕುರಿತಂತೆ ನಿರ್ಧಾರ ಪ್ರಕಟಿಸಲು ದೆಹಲಿ ಸರ್ಕಾರಕ್ಕೆ ಜುಲೈ 23ರವರೆಗೆ ಕಾಲಾವಕಾಶ ನೀಡಲಾಗಿದೆ. ಸರ್ಕಾರದ ಮನವಿಯಂತೆ ದೆಹಲಿ ಕೋರ್ಟ್‌ ಸೋಮವಾರ ಈ ಆದೇಶ ಪ್ರಕಟಿಸಿತು.

ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ದೇಶವಿರೋಧಿ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಕುಮಾರ್‌ ಮತ್ತು ಇತರರ ವಿರುದ್ಧ 2016ರಲ್ಲಿ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಒಂದು ತಿಂಗಳು ಕಾಲಾವಕಾಶ ನೀಡುವಂತೆ ಸರ್ಕಾರವು ಮನವಿ ಮಾಡಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT