ಕನ್ಹಯ್ಯಾ ವಿರುದ್ಧದ ದೇಶದ್ರೋಹ ಪ್ರಕರಣ: ಗಡುವು ಕೇಳಿದ ದೆಹಲಿ ಸರ್ಕಾರ

ಸೋಮವಾರ, ಏಪ್ರಿಲ್ 22, 2019
31 °C

ಕನ್ಹಯ್ಯಾ ವಿರುದ್ಧದ ದೇಶದ್ರೋಹ ಪ್ರಕರಣ: ಗಡುವು ಕೇಳಿದ ದೆಹಲಿ ಸರ್ಕಾರ

Published:
Updated:
Prajavani

ನವದೆಹಲಿ: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್‌ ಮತ್ತು ಇತರರನ್ನು ತನಿಖೆಗೆ ಒಳಪಡಿಸುವ ಸಂಬಂಧ ನಿರ್ಧಾರ ಕೈಗೊಳ್ಳಲು ತಿಂಗಳ ಸಮಯಾವಕಾಶಬೇಕು ಎಂದು ದೆಹಲಿ ಸರ್ಕಾರ ಬುಧವಾರ ನ್ಯಾಯಾಲಯಕ್ಕೆ ತಿಳಿಸಿದೆ.

ಈ ಸಂಬಂಧ ಸ್ಪಷ್ಟ ನಿರ್ಧಾರಕ್ಕೆ ಬರಲು ಎಷ್ಟು ಅವಧಿ ಬೇಕು ಎಂದು ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ದೀಪಕ್‌ ಶೆರಾವತ್‌ ದೆಹಲಿಯ ಎಎಪಿ ಸರ್ಕಾರಕ್ಕೆ ಪ್ರಶ್ನಿಸಿದ್ದರು.

2016ರ ಫೆಬ್ರುವರಿ 9ರಂದು ಜೆಎನ್‌ಯು ಆವರಣದಲ್ಲಿ ನಡೆದ ಮೆರವಣಿಯಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಲು ಕನ್ಹಯ್ಯಾ ಪ್ರೇರೇಪಿಸಿದ್ದರು ಎಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಜನವರಿ 14ರಂದು ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 6

  Angry

Comments:

0 comments

Write the first review for this !