ಮಾನಹಾನಿ ಆರೋಪ: ತಮಿಳು ಪತ್ರಕರ್ತ ನಕ್ಕೀರನ್ ಗೋಪಾಲ್ ಬಂಧನ

7

ಮಾನಹಾನಿ ಆರೋಪ: ತಮಿಳು ಪತ್ರಕರ್ತ ನಕ್ಕೀರನ್ ಗೋಪಾಲ್ ಬಂಧನ

Published:
Updated:

ಚೆನ್ನೈ: ತಮಿಳುನಾಡು ರಾಜ್ಯಪಾಲ ಭನ್ವಾರಿಲಾಲ್ ಪುರೋಹಿತ್ ಕುರಿತು ಮಾನಹಾನಿಕರ ಲೇಖನ ಬರೆದ ಆರೋಪದ ಮೇಲೆ ಪತ್ರಕರ್ತ ನಕ್ಕೀರನ್ ಗೋಪಾಲ್ ಅವರನ್ನು ಪೊಲೀಸರು ಮಂಗಳವಾರ ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ತಮಿಳುನಾಡಿನ ಜನಪ್ರಿಯ ವಾರಪತ್ರಿಕೆ ‘ನಕ್ಕೀರನ್‌’ನ ಸಂಪಾದಕ ಗೋಪಾಲ್ ಪುಣೆಗೆ ಹೋಗಲೆಂದು ವಿಮಾನನಿಲ್ದಾಣಕ್ಕೆ ಬಂದಿದ್ದಾಗ ಪೊಲೀಸರು ಅವರನ್ನು ಬಂಧಿಸಿದರು. ರಾಜಭವನದ ಸಿಬ್ಬಂದಿ ನೀಡಿದ ದೂರಿನ ಆಧಾರದ ಮೇಲೆ ಗೋಪಾಲ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಮಿಳುನಾಡಿನ ಖಾಸಗಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ನಿರ್ಮಲಾ ದೇವಿ ಕುರಿತು ಗೋಪಾಲ್ ಲೇಖನ ಬರೆದಿದ್ದರು. ‘ಅಂಕಕ್ಕಾಗಿ ಸೆಕ್ಸ್’ ಹಗರಣದಲ್ಲಿ ಭಾಗಿಯಾಗಿದ್ದ ನಿರ್ಮಲಾ ಅವರನ್ನು ಪೊಲೀಸರು ಬಂಧಿಸಿದ್ದರು. ಉತ್ತಮ ಅಂಕ ಪಡೆಯಲು ‘ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಲೈಂಗಿಕ ಸೇವೆ ಒದಗಿಸಬೇಕು’ ಎಂದು ವಿದ್ಯಾರ್ಥಿನಿಯರನ್ನು ಒತ್ತಾಯಿಸಿದ್ದ ಆರೋಪ ನಿರ್ಮಲಾ ದೇವಿ ಅವರ ಮೇಲಿತ್ತು ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ಪ್ರಕರಣದಲ್ಲಿ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೊಹಿತ್ ಅವರ ವಿಚಾರಣೆ ನಡೆಸಿಲ್ಲ ಎಂದು ಗೋಪಾಲ್ ತಮ್ಮ ಲೇಖನದಲ್ಲಿ ಬರೆದಿದ್ದರು. ಈ ಸಾಲುಗಳು ಮಾನಹಾನಿಕರ ಮತ್ತು ಅವಹೇಳನಕಾರಿಯಾಗಿವೆ ಎಂದು ಚೆನ್ನೈ ಪೊಲೀಸರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 9

  Happy
 • 0

  Amused
 • 0

  Sad
 • 1

  Frustrated
 • 5

  Angry

Comments:

0 comments

Write the first review for this !