ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟು, ಗೌನ್ ಧರಿಸುವುದು ಬೇಡ: ಸುಪ್ರೀಂ ಕೋರ್ಟ್‌

ಕೊರೊನಾ ವೈರಸ್‌ ವೇಗವಾಗಿ ಹರಡುವ ಸಾಧ್ಯತೆ
Last Updated 14 ಮೇ 2020, 1:43 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಪಿಡುಗಿನ ಹಿನ್ನೆಲೆಯಲ್ಲಿ ವಕೀಲರು ಕೋಟು ಹಾಗೂ ನಿಲುವಂಗಿ (ಗೌನ್‌) ಧರಿಸಬಾರದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಸೂಚಿಸಿದೆ.

ಸುಪ್ರೀಂಕೋರ್ಟ್‌ನ ಮಹಾ ಕಾರ್ಯದರ್ಶಿ ಸಂಜೀವ್‌ ಎಸ್‌.ಕಲಗಾಂವ್ಕರ್‌ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ.

‘ಕೋಟು ಹಾಗೂ ನಿಲುವಂಗಿ ಧರಿಸುವುದರಿಂದ ಕೊರೊನಾ ವೈರಸ್‌ ಸೋಂಕು ಹರಡುವ ಸಾಧ್ಯತೆ ಇದೆ. ಈ ಆರೋಗ್ಯ ತುರ್ತು ಪರಿಸ್ಥಿತಿ ಅಂತ್ಯವಾಗುವವರೆಗೆ ಇಲ್ಲವೇ ಮುಂದಿನ ಆದೇಶದವರೆಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ನಡೆಯುವ ಕಲಾಪದ ವೇಳೆ ಇವುಗಳನ್ನು ಧರಿಸಬಾರದು’ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ, ನ್ಯಾಯಮೂರ್ತಿಗಳಾದ ಇಂದೂ ಮಲ್ಹೋತ್ರ, ಹೃಷಿಕೇಶ್‌ ರಾಯ್‌ ಅವರನ್ನು ಒಳಗೊಂಡ ನ್ಯಾಯ ಪೀಠ ವಿಡಿಯೊ ಕಾನ್ಫರೆನ್ಸ್‌ ಮೂಲಕ ಅರ್ಜಿಯೊಂದರ ವಿಚಾರಣೆ ನಡೆಸುತ್ತಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ನ್ಯಾಯ ಪೀಠದಲ್ಲಿದ್ದ ನ್ಯಾಯಮೂರ್ತಿಗಳು ಕೋಟು ಹಾಗೂ ನಿಲುವಂಗಿ ಧರಿಸಿರಲಿಲ್ಲ.

‘ನ್ಯಾಯಾಧೀಶರು, ವಕೀಲರು ಸಾಮಾನ್ಯ ವಸ್ತ್ರಗಳನ್ನೇ ಧರಿಸಿ, ಕಲಾಪದಲ್ಲಿ ಪಾಲ್ಗೊಳ್ಳಬೇಕು’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT