ಈ ಬಜೆಟ್‌ ಟ್ರೈಲರ್ ಮಾತ್ರ: ಪ್ರಧಾನಿ ನರೇಂದ್ರ ಮೋದಿ

7

ಈ ಬಜೆಟ್‌ ಟ್ರೈಲರ್ ಮಾತ್ರ: ಪ್ರಧಾನಿ ನರೇಂದ್ರ ಮೋದಿ

Published:
Updated:

ನವದೆಹಲಿ: ಇಂದು ಮಂಡಿಸಿರುವ ಬಜೆಟ್‌ ಟ್ರೈಲರ್ ಮಾತ್ರ, ಚುನಾವಣೆ ಬಳಿಕ ದೇಶವನ್ನು ಅಭಿವೃದ್ಧಿ ಪತದತ್ತ ಕೊಂಡೊಯ್ಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.  

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು ಹಂಗಾಮಿ ಹಣಕಾಸು ಸಚಿವ ಪೀಯೂಷ್ ಗೋಯಲ್ ಶುಕ್ರವಾರ ಮಂಡಿಸಿದರು.

ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಧ್ಯಮ ವರ್ಗ, ಮಹಿಳೆಯರು, ರೈತರು ಮತ್ತು ನೌಕರರಿಗೆ ವೈಯಕ್ತಿಕ ತೆರಿಗೆ ವಿನಾಯಿತಿ ಸೇರಿದಂತೆ ಹಲವು ಕೊಡುಗೆಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ.

12 ಕೋಟಿ ರೈತರು, 3 ಕೋಟಿ ಮಧ್ಯಮವರ್ಗದ ಜನ, ಅಸಂಘಟಿತ ವಲಯದ ಸುಮಾರು 40 ಕೋಟಿ ಕಾರ್ಮಿಕರು  ಬಜೆಟ್‌ನಿಂದ ಲಾಭ ಪಡೆಯಲಿದ್ದಾರೆ. ಸರ್ಕಾರದ ಕ್ರಮಗಳಿಂದ ಬಡತನದ ಪ್ರಮಾಣ ದಾಖಲೆ ಮಟ್ಟದಲ್ಲಿ ಇಳಿಕೆಯಾಗಲಿದೆ ಎಂಬ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದ್ದಾರೆ. 

ವಾರ್ಷಿಕ ಆದಾಯ ತೆರಿಗೆ ಮಿತಿಯನ್ನು ₹2.5 ಲಕ್ಷದಿಂದ ₹5 ಲಕ್ಷದವರೆಗೆ ಏರಿಸಲಾಗಿದ್ದು, ₹5ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಪ್ರತಿ ವರ್ಷ ಬಜೆಟ್‌ ಮಂಡಿಸುವ ಮುನ್ನ ಆದಾಯ ತೆರಿಗೆ ಮಿತಿಯನ್ನು ಹೆಚ್ಚಳ ಮಾಡುವಂತೆ ಪ್ರಸ್ತಾವನೆಗಳು ಬರುತ್ತಿದ್ದವು ನಮ್ಮ ಸರ್ಕಾರ ಇದನ್ನು ಜನರ ಬೇಡಿಕೆಯನ್ನು ಪೂರೈಸಿದೆ ಎಂದು ಮೋದಿ ತಿಳಿಸಿದ್ದಾರೆ. 

ಈ ಬಜೆಟ್‌ ಬಡವರಿಗೆ ಆಶ್ರಯ, ರೈತರಿಗೆ ಶಕ್ತಿ, ಕಾರ್ಮಿಕರಿಗೆ ಗೌರವವನ್ನು ತಂದುಕೊಡಲಿದೆ, ಮಧ್ಯಮವರ್ಗದ ಜನರ ಕನಸುಗಳು ನನಸಾಗಲಿವೆ. ಬಜೆಟ್‌ ನೆರವಿನಿಂದಾಗಿ ದೇಶದ 130 ಕೋಟಿ ಜನರ ಕನಸುಗಳು ನನಸಾಗಲಿವೆ ಎಂದು ಮೋದಿ ಹೇಳಿದ್ದಾರೆ. 

‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ ಸ್ಥಾ‍ಪನೆ, ರೈತರ ಖಾತೆಗೆ ₹6 ಸಾವಿರ

ವೇತನದಾರರಿಗೆ ಬಜೆಟ್‌ ಬೋನಸ್: ₹ 5 ಲಕ್ಷ ವರೆಗೆ ತೆರಿಗೆ ವಿನಾಯ್ತಿ​

ಕೇಂದ್ರ ಬಜೆಟ್‌ 2019: ರಕ್ಷಣಾ ವೆಚ್ಚ ₹3 ಲಕ್ಷ ಕೋಟಿಗೆ ಏರಿಕೆ​

ರೈಲ್ವೆಗೆ ₹1.6 ಲಕ್ಷ ಕೋಟಿ: ಕಾವಲುರಹಿತ ಕ್ರಾಸಿಂಗ್‌ಗಳು ಬಂದ್‌​

ಹೆಚ್ಚಿದೆ ಆದಾಯ, ಪ್ರಕಾಶಿಸುತ್ತಿದೆ ಭಾರತ: ಪೀಯೂಷ್ ಗೋಯಲ್

ಅಸಂಘಟಿತ ವಲಯದ ಕಾರ್ಮಿಕರಿಗಾಗಿ ‘ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ಧನ್’​

ಆಯುಷ್ಮಾನ್ ಭಾರತ್‌‘ ಯೋಜನೆಯಡಿ 10 ಲಕ್ಷ ಜನರಿಗೆ ಚಿಕಿತ್ಸೆ

ನಾನು ರೂಪಿಸಿದ್ದ ಯೋಜನೆಯ ಅರ್ಧ ಕಾಪಿ ಹೊಡೆದಿದ್ದಾರೆ: ಸಿದ್ದರಾಮಯ್ಯ ಆರೋಪ​

ಕೃತಕ ಬುದ್ಧಿಮತ್ತೆ ಕೇಂದ್ರ ಸ್ಥಾಪನೆ, ಲಕ್ಷ ಡಿಜಿಟಲ್‌ ಗ್ರಾಮ ನಿರ್ಮಾಣಕ್ಕೆ ಒತ್ತು

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 1

  Sad
 • 0

  Frustrated
 • 3

  Angry

Comments:

0 comments

Write the first review for this !