ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದ ಸೋಮಯ್ಯ ಬೋಪಣ್ಣ ಗುವಾಹಟಿ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ

Last Updated 29 ಅಕ್ಟೋಬರ್ 2018, 19:45 IST
ಅಕ್ಷರ ಗಾತ್ರ

ಗುವಾಹಟಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಅಜ್ಜಿಕುಟ್ಟೀರ ಸೋಮಯ್ಯ ಬೋಪಣ್ಣ ಅವರು ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಅಸ್ಸಾಂ ರಾಜ್ಯಪಾಲ ಜಗದೀಶ್‌ ಮುಖಿ ಅವರು ಸೋಮಯ್ಯ ಅವರಿಗೆ ಪ್ರಮಾಣ ವಚನ ಬೋಧಿಸಿದರು.

59 ವರ್ಷದ ಸೋಮಯ್ಯ ಅವರು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎ.ಕೆ. ಗೋಸ್ವಾಮಿ ಅವರಿಂದ ಅಧಿಕಾರ ಸ್ವೀಕರಿಸಿಕೊಂಡರು.

ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನೊವಾಲ್‌, ಕಾನೂನು ಸಚಿವ ಸಿದ್ಧಾರ್ಥ ಭಟ್ಟಾಚಾರ್ಯ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT